ಕಲಬುರುಗಿ: ಹಿಜಾಬ್ ವಿವಾದ ಸಂಬಂಧ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೇಡಂ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಟ್ಟಣ ಹಾಗೂ ಪಟ್ಟಣದ 5 ಕಿ.ಮಿ. ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಜೊತೆಗೆ ಕಾಂಗ್ರೆಸ್ ಮುಖಂಡನ ಬಟಗೇರಾ ಕ್ರಾಸ್‌ನ ನಿವಾಸದೆದುರು ಎರಡು ಡಿಆರ್ ವ್ಯಾನ್ ಹಾಗೂ ಸಿಪಿಐ, ಪಿಎಸ್ಐ ನಿಯೋಜಿಸಲಾಗಿದೆ.