ಕಲಬುರಗಿ:ನಗರದ ಜಾಫರಾಬಾದ್ ಪ್ರದೇಶದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಲಾಗಿರುವ ಮನೆಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.
ಕಲಬುರಗಿ: ಸರ್ಕಾರಿ ಜಾಗದಲ್ಲಿದ್ದ ಅಕ್ರಮ ಕಟ್ಟಡಗಳ ತೆರವು - ಸರ್ಕಾರಿ ಜಮೀನು ಒತ್ತುವರಿ
ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮನೆ ಹಾಗೂ ಇತರ ಕಟ್ಟಡಗಳನ್ನು ಇಂದು ಬೆಳಗ್ಗೆ ಜಿಲ್ಲಾಡಳಿತ ಬುಲ್ಡೋಜರ್ ಮೂಲಕ ತೆರವುಗೊಳಿಸಿತು.
ಜಿಲ್ಲಾಡಳಿತದಿಂದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ನಡೆಯಿತು.
ಬೆಳಗ್ಗೆ ಪೊಲೀಸ್ ಬಲದೊಂದಿಗೆ ತೆರಳಿದ ಜಿಲ್ಲಾಧಿಕಾರಿ, ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾರ್ಯಾಚರಣೆ ಶುರು ಮಾಡಿದರು. ಸುಮಾರು 20 ಎಕರೆ ಪ್ರದೇಶವನ್ನು ಕೆಲವರು ಒತ್ತುವರಿ ಮಾಡಿಕೊಂಡು ಮನೆ ಇನ್ನಿತರ ಕಟ್ಟಡಗಳನ್ನು ಕಟ್ಟಿದ್ದಾರೆ. ಹೀಗೆ ನಿರ್ಮಿಸಲಾದ ಮನೆಗಳನ್ನು ನೆಲಸಮಗೊಳಿಸಲಾಗುತ್ತಿದೆ.
ಇದನ್ನೂ ಓದಿ :2022-23 ಶೈಕ್ಷಣಿಕ ಸಾಲಿಗೆ ಹೆಚ್ಚುವರಿ 5,000 ಅತಿಥಿ ಶಿಕ್ಷಕರನ್ನ ನೇಮಿಸಲು ಸರ್ಕಾರ ಆದೇಶ
Last Updated : Jun 19, 2022, 1:40 PM IST