ಕಲಬುರಗಿ : ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರ ಗ್ರಾಮದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.
ಕಲಬುರಗಿ : ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ - ಜೇವರ್ಗಿ ತಾಲೂಕಿನ ಹರನೂರ ಗ್ರಾಮ
ಸುದ್ದಿ ತಿಳಿದು ಸ್ಥಳಕ್ಕಾಮಿಸಿದ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಸಂಗಣಗೌಡ ಪಾಟೀಲ್ ಹಾಗೂ ಆಶಾ ಕಾರ್ಯಕರ್ತೆ, ಜೇವರ್ಗಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿಶುವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ..
ಹರನೂರ ಗ್ರಾಮದ ಹೊರವಲಯದಲ್ಲಿ ಇಂದು ನಸುಕಿನ ಜಾವ ಜೋಳದ ದಂಟು ಹಾಗೂ ಗಿಡದ ತೊಪ್ಪಲಿನಿಂದ ನವಜಾತ ಹೆಣ್ಣು ಶಿಶುವನ್ನು ಮುಚ್ಚಿ ಬಿಟ್ಟು ಹೋಗಿದ್ದಾರೆ. ಈ ವೇಳೆ ಪ್ರಾಣಿಗಳು ಮಗುವಿನ ಮುಖದ ಭಾಗವನ್ನು ಕಚ್ಚಿ ತಿಂದಿವೆ. ಬಳಿಕ ಮಗು ಅಳುತ್ತಿದ್ದ ಶಬ್ದ ಕೇಳಿದ ಗ್ರಾಮಸ್ಥರು ಸ್ಥಳಕ್ಕಾಮಿಸಿ ರಕ್ಷಣೆ ಮಾಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಮಿಸಿದ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಸಂಗಣಗೌಡ ಪಾಟೀಲ್ ಹಾಗೂ ಆಶಾ ಕಾರ್ಯಕರ್ತೆ, ಜೇವರ್ಗಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿಶುವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮಗು ಚೇತರಿಸಿಕೊಳ್ಳುತ್ತಿದ್ದು, ಜೇವರ್ಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.