ಕಲಬುರಗಿ: ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ಅವರು ಕಲಬುರಗಿಗೆ ಭೇಟಿ ನೀಡಿದರು. ಬೆಂಗಳೂರಿನಿಂದ ವಿಮಾನದ ಮೂಲಕ ಆಗಮಿಸಿದ ಅವರನ್ನು ಜಿಲ್ಲಾ ಕಾಂಗ್ರೆಸ್ ನಾಯಕರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಆದರೆ, ಕಾರ್ಯಕರ್ತರು ಯಾರೊಬ್ಬರೂ ಸಾಮಾಜಿಕ ಅಂತರ ಪಾಲಿಸಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಮೊದಲ ಬಾರಿಗೆ ಕಲಬುರಗಿಗೆ ಭೇಟಿ ಕೊಟ್ಟ ಡಿಕೆಶಿ: ಅದ್ಧೂರಿ ಸ್ವಾಗತ - D.K.Shivakumar visit to Kalburgi
ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕಲಬುರಗಿಗೆ ಭೇಟಿ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ವಿಮಾನ ನಿಲ್ದಾಣದಿಂದ ನೇರವಾಗಿ ಗಾಣಗಾಪುರಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ದತ್ತಾತ್ರೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದ ಸದಸ್ಯರೂ ಜೊತೆಗಿದ್ದರು. ಇಲ್ಲಿ ಸುವರ್ಣ ಪಾದುಕೆ ಪೂಜೆ ನೆರವೇರಿಸಿ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು.