ಕಲಬುರಗಿ: ಮಸೀದಿಗಳ ಮೇಲಿನ ಮೈಕ್ಗಳ ತೆರವು ಅಭಿಯಾನ ರಾಜ್ಯಾದ್ಯಂತ ತೀವ್ರಗೊಳಿಸಲಾಗುತ್ತಿದೆ. ನಾಳೆ ಮಧ್ಯಾಹ್ನ ದೇವಸ್ಥಾನ ಮುಂದೆ ಹನುಮಾನ್ ಚಾಲೀಸ ಪಠಿಸುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ನಗರದ ಸೂಪರ್ ಮಾರ್ಕೆಟ್ ಹನುಮಾನ್ ದೇವಸ್ಥಾನದ ಬಳಿ ಮಧ್ಯಾಹ್ನ 12 ಗಂಟೆಯಿಂದ ಹನುಮಾನ್ ಚಾಲೀಸ ಪಠಿಸುವ ಮೂಲಕ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಹೋರಾಟಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡದೆ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ದ್ವಂಧ್ವ ನೀತಿ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.