ಕಲಬುರಗಿ: ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಪ್ರಚಾರ ಮುಗಿಯುತ್ತಿದ್ದಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದಾರೆ.
ಉಪ ಚುನಾವಣೆ ಪ್ರಚಾರ ಅಂತ್ಯ: ದತ್ತಾತ್ರೇಯ ದೇವರ ಮೊರೆಹೋದ ಹೆಚ್ಡಿಡಿ, ಹೆಚ್ಡಿಕೆ - ಹೆಚ್.ಡಿ ದೇವೇಗೌಡ ಹಾಗು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೆಂಪಲ್ ರನ್
ಬಹಿರಂಗ ಪ್ರಚಾರ ಮುಕ್ತಾಯಕ್ಕೂ ಮುನ್ನ ನಿನ್ನೆ(ಬುಧವಾರ) ಸಿಂದಗಿಯಲ್ಲಿ ಪ್ರಚಾರ ನಡೆಸಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಇಂದು ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ದತ್ತಾತ್ರೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ
ಅಫಜಲಪುರ ತಾಲೂಕಿನ ದೇವಲ್ ಗಾಣಗಾಪೂರಕ್ಕೆ ಆಗಮಿಸಿದ ಇಬ್ಬರು ನಾಯಕರು ದತ್ತಾತ್ರೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಂದಗಿ ಮತ್ತು ಹಾನಗಲ್ ಉಪಚುನಾಣೆ ಪ್ರಚಾರ ಮುಗಿದ ಬೆನ್ನಲ್ಲೇ ದಳಪತಿಗಳು ನಿರಾಳರಾಗಿದ್ದಾರೆ. ಉಪಚುನಾಣೆಯಲ್ಲಿ ಜೆಡಿಎಸ್ ಪಕ್ಷ ವಿಜಯಶಾಲಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ದಳಪತಿಗಳಿಗೆ ಜೆಡಿಎಸ್ ಮುಖಂಡ ಬಂಡೆಪ್ಪ ಖಾಶೆಂಪುರ್ ಸಾಥ್ ನೀಡಿದ್ದರು.