ಕಲಬುರಗಿ :ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಮಳೆಯಾಗುತ್ತಿದ್ದು, ಬಿಸಿಲನಗರಿ ತಂಪಾಗಿದೆ. ಒಂದೆಡೆ ಮಳೆ ರೈತರ ಮೊಗದಲ್ಲಿ ಮಂದಹಾಸ ತಂದರೆ, ಮತ್ತೊಂದೆಡೆ ನಗರದ ರಸ್ತೆಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ನಗರದ ಆರ್ಚಿಡ್ ಮಾಲ್, ಸೂಪರ್ ಮಾರ್ಕೆಟ್ ಮುಖ್ಯ ರಸ್ತೆ ಸಂಪೂರ್ಣ ಜಲಮಯವಾಗಿದ್ದು. ಚರಡಿ ಭರ್ತಿಯಾಗಿ ರಸ್ತೆ ಮೇಲೆ ನೀರು ಅಡ್ಡಗಟ್ಟಿ ನಿಂತಿದ್ದರಿಂದ ಟ್ರಾಫಿಕ್‌ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ನಿನ್ನೆ ಏಕಾಏಕಿ ಮಳೆ ಅಬ್ಬರಿಸಿದ್ದರಿಂದ ಬಹುಪಾಲು ತಗ್ಗು ಪ್ರದೇಶಗಳಲ್ಲಿ ನೀರು ಶೇಖರಣೆಗೊಂಡು ಜನ ಪರಾದಾಡಿದ ಪ್ರಸಂಗ ನಡೆಯಿತು.