ಕಲಬುರಗಿ:ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಗೋಲ್ಡ್ ಹಬ್ ಬಳಿಯ ಮುಖ್ಯರಸ್ತೆ ಬಹುತೇಕ ಮುಳುಗಡೆಯಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ರಾತ್ರಿಯಡೀ ಆರ್ಭಟಿಸಿದ ಮಳೆಯಿಂದ ಜನರು ಕಂಗಾಲಾಗಿದ್ದಾರೆ.
ವರಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭೀಮಾ ನದಿ, ಆಮರ್ಜಾ ಡ್ಯಾಂ, ಮುಲ್ಲಾಮಾರಿ ಡ್ಯಾಂ ಭಾಗದಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಪ್ರವಾಹ ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.