ಕರ್ನಾಟಕ

karnataka

ETV Bharat / city

ಕಲಬುರಗಿ ಮೇಯರ್ ಚುನಾವಣೆ: ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ವಿಭಾಗೀಯ ಪೀಠ - high court on kalaburagi mayor election

ಪಾಲಿಕೆ ಮೇಯರ್ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಾತ್ಕಾಲಿಕವಾಗಿ ತಡೆ‌ ನೀಡಿದೆ.

high court on kalaburagi mayor election issue
ಕಲಬುರಗಿ ಮೇಯರ್ ಚುನಾವಣೆ: ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ವಿಭಾಗೀಯ ಪೀಠ

By

Published : Feb 24, 2022, 4:38 PM IST

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಸಂಬಂಧ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಬಿಜೆಪಿ ಸಲ್ಲಿಸಿದ್ದ ಮೇಲ್ಮನವಿ ಇತ್ಯರ್ಥ ಆಗುತ್ತೆ ಎಂದು ನಿರೀಕ್ಷೆ ಹೊಂದಲಾಗಿತ್ತು. ಆದರೆ ನಿರೀಕ್ಷೆ ಹುಸಿಯಾಗಿದ್ದು, ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಾತ್ಕಾಲಿಕವಾಗಿ ತಡೆ‌ ನೀಡಿದೆ.

ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಐವರು ಎಮ್‌ಎಲ್‌ಸಿಗಳ ಹೆಸರು ಸೇರ್ಪಡೆ ಮತ್ತು ಮೇಯರ್ ಮೀಸಲಾತಿ ಬದಲಾವಾಣೆ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಹೈಕೋರ್ಟ್ ಮೆಟ್ಟಿಲೇರಿತ್ತು. ಕಾಂಗ್ರೆಸ್ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಹಳೇ ಮೀಸಲಾತಿ ಮತ್ತು ಹಳೇ ಮತದಾರರ ಪಟ್ಟಿಯಂತೆ ತಿಂಗಳೊಳಗೆ ಚುನಾವಣೆ ‌ನಡೆಸುವಂತೆ ಆದೇಶ ಹೊರಡಿಸಿತ್ತು. ನಂತರ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಬಿಜೆಪಿಯು ಫೆಬ್ರವರಿ 4 ರಂದು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಇದನ್ನೂ ಓದಿ:ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ರವಾನೆ ಆರೋಪ: ಉಡುಪಿಯಲ್ಲಿ ಕಾಲೇಜು ಪಿಆರ್​ಒ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಇಂದು ಅರ್ಜಿ ವಿಚಾರಣೆ ‌ನಡೆಸಿದ ದ್ವಿ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ‌ ಎಸ್ ಆರ್ ಕೃಷ್ಣಕುಮಾರ್ ಮತ್ತು ನ್ಯಾಯಮೂರ್ತಿ ಶ್ರೀಮತಿ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ, ಒಂದು ತಿಂಗಳೊಳಗೆ ಚುನಾವಣೆ ‌ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಾತ್ಕಾಲಿಕ ತಡೆ‌ ನೀಡಿ ವಿಚಾರಣೆಯನ್ನ ಮುಂದೂಡಿ ಆದೇಶ ಹೊರಡಿಸಿದೆ.

ವರ್ಚುವಲ್ ಮೂಲಕ ನಡೆದ ಅರ್ಜಿ ವಿಚಾರಣೆಯಲ್ಲಿ ಬಿಜೆಪಿ ಪರವಾಗಿ ನ್ಯಾಯವಾದಿ ಅಶೋಕ್​ ಹಾರನಹಳ್ಳಿ ಮತ್ತು ಅಡ್ವೋಕೆಟ್ ಜನರಲ್ ನಾವದಗಿ ವಾದ ಮಂಡಿಸಿದರು.

ABOUT THE AUTHOR

...view details