ಕಲಬುರಗಿ: ಜಿಲ್ಲೆಯಲ್ಲಿ ಇಂದು 11 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಒಬ್ಬರು ದೆಹಲಿಯಿಂದ ವಾಪಸಾದವರಾದರೆ, ಉಳಿದವರು ಮುಂಬೈನಿಂದ ಬಂದ ವಲಸಿಗರಾಗಿದ್ದಾರೆ.
ಕಲಬುರಗಿಯಲ್ಲಿಂದು 11 ಹೊಸ ಕೋವಿಡ್ ಕೇಸ್: ಒಂದೇ ದಿನ 66 ಜನ ಡಿಸ್ಚಾರ್ಜ್ - ಕಲಬುರಗಿ ಸುದ್ದಿ
ಕಲಬುರಗಿ ಜಿಲ್ಲೆಯಲ್ಲಿ ಇಂದು 11 ಜನರಿಗೆ ಸೋಂಕು ದೃಢಪಟ್ಟಿದ್ದು, ಒಂದೇ ದಿನ 66 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಲಬುರಗಿ ಕೊರೊನಾ
ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 780ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 66 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವ್ ಸಂಖ್ಯೆ ಇಳಿಮುಖವಾಗಿ, ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಜನರಿಗೆ ಸಮಾಧಾನ ತಂದಿದೆ.
ಕಲ್ಯಾಣ ಕರ್ನಾಟಕದಲ್ಲಿ ಇಂದು 49 ಜನರಿಗೆ ಸೋಂಕು ದೃಢಪಟ್ಟಿದೆ. ಯಾದಗಿರಿ ಜಿಲ್ಲೆಯಲ್ಲಿ 27 ಜನರಿಗೆ ಸೋಂಕು ದೃಢಪಟ್ಟರೆ, ಬೀದರ್ನಲ್ಲಿ 05 ಜನರಿಗೆ ಸೋಂಕು ದೃಢಪಟ್ಟಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂದು 102 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.