ಕಲಬುರಗಿ: ಅಪ್ರಾಪ್ತೆಯನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಜೇವರ್ಗಿ ತಾಲೂಕಿನ ಮಾರಡಗಿ ಗ್ರಾಮದ ನಿವಾಸಿ ದೇವರಾಜ್ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಮದುವೆಯಾಗುವುದಾಗಿ ಅಪಹರಿಸಿಕೊಂಡು ಬೆಂಗಳೂರು, ಗದಗ, ಮಾದನಹಿಪ್ಪರಗಿಗೆ ಕರೆದೊಯ್ದು ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕುರಿತು ಜೇವರ್ಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ನಡೆಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕಲಬುರಗಿ ಕೋರ್ಟ್ - ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್. ಗೋಪಾಲಪ್ಪ
ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಜೀವಾಬಧಿ ಶಿಕ್ಷೆ ವಿಧಿಸಿದ ಕಲಬುರಗಿ ನ್ಯಾಯಾಲಯ
ಪ್ರಕರಣ ಕೈಗೆತ್ತಿಕೊಂಡ 2ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್. ಗೋಪಾಲಪ್ಪ ಅವರು ಸಾಕ್ಷಾಧಾರಗಳನ್ನು ಪರಿಶೀಲಿಸಿ ಆರೋಪಿಗೆ ಪೋಸ್ಕೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
Last Updated : Feb 11, 2020, 11:15 AM IST