ಕಲಬುರಗಿ: ರಕ್ಕಸ ಕೊರೊನಾ ಜಿಲ್ಲೆಯಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ಮತ್ತೆ ಎರಡು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಕಲಬುರಗಿಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ - ಕಲಬುರಗಿ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ
ಕಲಬುರಗಿ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.
ಕಲಬುರಗಿಯಲ್ಲಿ ಇಂದು ಇಬ್ಬರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ
ಮಹಾರಾಷ್ಟ್ರದಿಂದ ವಾಪಸ್ಸಾದ 42 ವರ್ಷದ ವ್ಯಕ್ತಿ ಹಾಗೂ ಕಲಬುರಗಿ ನಗರದ 32 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರಗಿ ನಗರದ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಸದ್ಯಕ್ಕೆ ಗೊತ್ತಾಗಿಲ್ಲ. ಇದರೊಂದಿಗೆ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.