ಕಲಬುರಗಿ:ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ ಪಾಟೀಲ್ ಸಾವಿನ ಕುರಿತಾಗಿ ಯಾವುದೇ ರೀತಿಯ ತನಿಖೆ ನಡೆಸಿದರೂ ಏನೂ ಪ್ರಯೋಜನವಿಲ್ಲ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಅವರು, ಡಬಲ್ ಇಂಜಿನ್ ಸರ್ಕಾರದಿಂದ ಪಾರದರ್ಶಕ ತನಿಖೆ ಅಸಾಧ್ಯ. ಸಂತೋಷ ಪಾಟೀಲ್‌ಗೆ ನ್ಯಾಯ ಸಿಗಲ್ಲ. ಅಂತಿಮವಾಗಿ ಹಳಿ ಮೇಲೆ ಕುಳಿತವರೇ ಸಾಯುತ್ತಾರೆ. ಘಟನೆ ಸಂಬಂಧ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ, ಅಭಿವೃದ್ಧಿ ವಿಚಾರದಲ್ಲಿ ಗುತ್ತಿಗೆದಾರರರು ಬೇಸತ್ತು ಹೋಗಿದ್ದಾರೆ ಎಂದರು.