ಕಲಬುರಗಿ: ಸಿಎಎ, ಎನ್ಆರ್ಸಿ ವಿರೋಧಿಸಿ ಹಾಗೂ ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆ ಮತ್ತು ನಿರುದ್ಯೋಗ ತಡೆಗಟ್ಟುವಂತೆ ಆಗ್ರಹಿಸಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಸಮಾವೇಶ - ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ
ಸಿಎಎ, ಎನ್ಆರ್ಸಿ ವಿರೋಧಿಸಿ ಹಾಗೂ ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆ ಮತ್ತು ನಿರುದ್ಯೋಗ ತಡೆಗಟ್ಟುವಂತೆ ಆಗ್ರಹಿಸಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು.
ಬೃಹತ್ ಸಮಾವೇಶ
ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಆಯೋಜಿಸಿದ ಬೃಹತ್ ಸಮಾವೇಶಕ್ಕೆ ನಿವೃತ್ತ ಪ್ರಾಧ್ಯಾಪಕ ಡಾ. ಚಂದ್ರ ಪೂಜಾರಿ ಅವರು ಉದ್ಘಾಟಿಸಿ ಮಾತನಾಡಿದರು. ಸಮಾವೇಶದಲ್ಲಿ ಸಿಎಎ, ಎನ್ಆರ್ಸಿ ಕಾಯ್ದೆಗಳಿಂದ ದೇಶದ ಮೇಲೆ ಉಂಟಾಗುವ ಪರಿಣಾಮ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದಿಂದ ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆ ಮತ್ತು ನಿರುದ್ಯೋಗ ಉಂಟಾಗಿದ್ದು, ಇದನ್ನು ತಡೆಗಟ್ಟುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು.