ಕರ್ನಾಟಕ

karnataka

ETV Bharat / city

ಮಿಡ್​ನೈಟ್​ ಪುಂಡರ ಹಾವಳಿಗೆ ಕಂಗಾಲಾದ ಕಲಬುರಗಿ ಜನ - set fire to Three bikes

ಕಲಬುರಗಿ ನಗರದಲ್ಲಿ ರಾತ್ರಿಯಾಗುತ್ತಿದ್ದಂತೆ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರುತ್ತಿದೆ. ಇದರಿಂದಾಗಿ ನಿವಾಸಿಗಳು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

set fire to Three bikes
ಮನೆ ಮುಂದೆ ನಿಲ್ಲಿಸಿದ್ದ ಮೂರು ಬೈಕ್​ಗಳಿಗೆ ಬೆಂಕಿ ಹಚ್ಚಿದ ಖದೀಮರು

By

Published : Jan 2, 2022, 12:33 PM IST

ಕಲಬುರಗಿ: ನಗರದಲ್ಲಿ ಇತ್ತೀಚೆಗೆ ಕಿಡಿಗೇಡಿಗಳ ಅಟ್ಟಹಾಸ ಎಲ್ಲೆ ಮೀರುತ್ತಿದೆ. ಎಣ್ಣೆ ಏಟಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಹಾನಿ ಉಂಟು ಮಾಡುತ್ತಿರುವ ಘಟನೆ ಪದೇ ಪದೇ ವರದಿಯಾಗುತ್ತಿದೆ.

ಕಳೆದ ವಾರವಷ್ಟೇ ನಗರದ ಸ್ವಾಮಿ ವಿವೇಕಾನಂದ ಬಡಾವಣೆಗೆ ಬೈಕ್‌ನಲ್ಲಿ ಲಗ್ಗೆಯಿಟ್ಟ ದುಷ್ಕರ್ಮಿಗಳು ಮನೆಯ ಮುಂದೆ ನಿಲ್ಲಿಸಿದ್ದ ಕಾರು, ಮನೆ ಗಾಜುಗಳಿಗೆ ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದರು. ಕಿಡಿಗೇಡಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಕೂಡ ಸೆರೆಯಾಗಿತ್ತು. ಇದೀಗ ಮತ್ತೆ ನಗರದ ಅಂಬೇಡ್ಕರ್ ಆಶ್ರಯ ಕಾಲೋನಿಯಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಮೂರು ಬೈಕ್​ಗಳಿಗೆ ಬೆಂಕಿ ಹಚ್ಚಿ ಖದೀಮರು ಪರಾರಿಯಾಗಿದ್ದಾರೆ.


ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಗಮನಿಸಿದ ಜನ ಭಯಭೀತರಾಗಿದ್ದಾರೆ. ಕೂಡಲೇ ಪೊಲೀಸರು ಪುಂಡ ಪೋಕರಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕುವಂತೆ ಒತ್ತಾಯಿಸಿದ್ದಾರೆ.

ABOUT THE AUTHOR

...view details