ಕರ್ನಾಟಕ

karnataka

ETV Bharat / city

ನವಜಾತ ಶಿಶು ಜೊತೆಗೆ ತಾಯಿ ಸಾವು: ಕಲಬುರಗಿ ಜಿಲ್ಲಾಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ - ತಾಯಿ ಮಗು ಸಾವು

ನಿನ್ನೆ ರಾತ್ರಿ ಒಂದು ಗಂಟೆ ಸಮಯದಲ್ಲಿ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ನಡುವಿನಗಳ್ಳಿ ಗ್ರಾಮದ ನಿವಾಸಿ ಕನ್ಯಾಕುಮಾರಿಗೆ ಹೆರಿಗೆ ಮಾಡಿಸಲಾಗಿದ್ದು, ಹೆರಿಗೆ ಸಮಯದಲ್ಲೇ ಕೂಸು ಮೃತಪಟ್ಟಿದೆ. ನಂತರ ತಾಯಿಯೂ ಮೃತಪಟ್ಟಿದ್ದು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

mother died with newborn baby
ನವಜಾತ ಶಿಶು ಜೊತೆಗೆ ತಾಯಿ ಸಾವು

By

Published : Sep 25, 2021, 10:52 AM IST

Updated : Sep 25, 2021, 11:16 AM IST

ಕಲಬುರಗಿ: ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಹೆರಿಗೆ ವೇಳೆ ನವಜಾತ ಶಿಶು ಸಾವನ್ನಪ್ಪಿದ್ದು, ಅರ್ಧ ಗಂಟೆಯಲ್ಲಿ ತಾಯಿ ಕೂಡಾ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಯಿ ಮಗು ಸಾವು- ಜಿಲ್ಲಾಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಕಲಬುರಗಿ ತಾಲೂಕಿನ ನಡುವಿನಗಳ್ಳಿ ಗ್ರಾಮದ ನಿವಾಸಿ ಕನ್ಯಾಕುಮಾರಿ (23) ಹಾಗೂ ಆಕೆಯ ನವಜಾತ ಶಿಶು ಮೃತರು. ಕಳೆದ ರಾತ್ರಿ ಕನ್ಯಾಕುಮಾರಿ ಅವರಿಗೆ ಹೆರಿಗೆ ನೋವು ಪ್ರಾರಂಭವಾಗಿತ್ತು. ಕುಟುಂಬದವರು ರಾತ್ರಿ 9 ಗಂಟೆಗೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ನಂತರ ಮಧ್ಯರಾತ್ರಿ ಒಂದು ಗಂಟೆ ಸಮಯದಲ್ಲಿ ಹೆರಿಗೆ ಮಾಡಿಸಲಾಗಿದ್ದು, ಹೆರಿಗೆ ಸಮಯದಲ್ಲೇ ಕೂಸು ಮೃತಪಟ್ಟಿದೆ. ಹೆರಿಗೆ ನಂತರ ಅರ್ಧ ಗಂಟೆಯಲ್ಲಿ ತಾಯಿ ಕೂಡಾ ಸಾವನ್ನಪ್ಪಿದ್ದಾಳೆ. ಹೆರಿಗೆ ನಂತರ ಹೊಟ್ಟೆ ನೋವು ಎಂದಿದಕ್ಕೆ ಕನ್ಯಾಕುಮಾರಿಗೆ ನರ್ಸ್ ಗಳು ಮಾತ್ರೆ ನೀಡಿದ್ದರು. ಮಾತ್ರ ಸೇವಿಸಿದ್ದ ಕೆಲವೇ ನಿಮಿಷಗಳಲ್ಲಿ ತಾಯಿಯೂ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಗದಗ: ಇಂಗ್ಲಿಷ್ ಶಿಕ್ಷಕರನ್ನು ನಿಯೋಜಿಸಿ ಎಂದು ಅಧಿಕಾರಿಗಳ ಕಾಲು ಹಿಡಿದ ಮಕ್ಕಳು

ತಾಯಿ-ಮಗು ಸಾವಿಗೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ಲಕ್ಷ್ಯ ತೋರಿದ ಆರೋಗ್ಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಸ್ಪತ್ರೆ ಎದುರಿಗೆ ಪ್ರತಿಭಟನೆ ನಡೆಸಿದ್ದಾರೆ.

Last Updated : Sep 25, 2021, 11:16 AM IST

ABOUT THE AUTHOR

...view details