ಕಲಬುರಗಿ:ಸಂಸದ ಡಾ.ಉಮೇಶ್ ಜಾಧವ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಸಂಸದ ಡಾ.ಉಮೇಶ್ ಜಾಧವ್ಗೆ ಎದೆ ನೋವು; ಖಾಸಗಿ ಆಸ್ಪತ್ರೆಗೆ ದಾಖಲು - MP Umesh Jadhav news
ಇತ್ತೀಚೆಗೆ ಕೊರೊನಾದಿಂದ ಗುಣಮುಖರಾಗಿ ಬಂದಿದ್ದ ಸಂಸದ ಜಾಧವ್ಗೆ, ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿದೆ. ಆರೋಗ್ಯದಲ್ಲಿ ಏರುಪೇರು ಆಗಿರುವ ಕಾರಣ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಡಾ.ಉಮೇಶ್ ಜಾಧವ್
ಇತ್ತೀಚೆಗೆ ಕೊರೊನಾದಿಂದ ಗುಣಮುಖರಾಗಿ ಬಂದಿದ್ದಕಲಬುರಗಿಸಂಸದ ಜಾಧವ್ಗೆ, ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿದೆ. ಆರೋಗ್ಯದಲ್ಲಿ ಏರುಪೇರು ಆಗಿರುವ ಕಾರಣ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ. ಮಂಜುನಾಥ್ ನಿರ್ದೇಶನದಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಟ್ವಿಟ್ ಮಾಡಿದ ಸಂಸದ ಜಾಧವ್, ಶೀಘ್ರವೇ ಗುಣಮುಖನಾಗಿ ಹಿಂದಿರುಗಲಿದ್ದೇನೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ.