ಕಲಬುರಗಿ: ಬೆಳ್ಳಂಬೆಳಗ್ಗೆ ಜನನಿಬಿಡ ಪ್ರದೇಶದಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕಲಬುರಗಿಯಲ್ಲಿ ಹಬ್ಬದ ದಿನವೇ ಹರಿಯಿತು ನೆತ್ತರು: ಕಾನ್ಸ್ಟೇಬಲ್ ಮಗನ ಬರ್ಬರ ಕೊಲೆ - kalburgi crime news
ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾವಿರಾರು ಜನರ ಮುಂದೆ ಯುವಕನೋರ್ವನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಅಭಿಷೇಕ್ (25) ಕೊಲೆಯಾದ ಯುವಕ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿರುವ ಚಂದ್ರಕಾಂತ್ ಎಂಬುವರ ಪುತ್ರ. ಅಭಿಷೇಕ್‌ನನ್ನು ಕೇಂದ್ರ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಗಳು ಸಾವಿರಾರು ಜನರ ಮುಂದೆ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಲೆಗೈದಿದ್ದಾರೆ. ಮಾರಕಾಸ್ತ್ರ ಹಿಡಿದು ಯುವಕನನ್ನು ಅಟ್ಟಾಡಿಸಿರುವ ದೃಶ್ಯ ಬಸ್ ನಿಲ್ದಾಣ ಬಳಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಕೊಲೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಈ ಕೊಲೆ ಹುಡುಗಿಯ ವಿಚಾರದಲ್ಲಿ ಉಂಟಾದ ಜಗಳದ ಹಳೇ ವೈಷಮ್ಯ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿ ಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಡಿಸಿಪಿ ಶ್ರೀನಿವಾಸಲು ತಿಳಿಸಿದ್ದಾರೆ.