ಕಲಬುರಗಿ:ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡುವುದರಲ್ಲಿ ನಿಪುಣರು. ಅವರ ಮಾತನ್ನು ದೇಶದ ಜನ ಸೀರಿಯಸ್ ಆಗಿ ಪರಿಗಣಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಟಾಂಗ್ ನೀಡಿದ್ದಾರೆ.
ರಾಹುಲ್ ಗಾಂಧಿ ಮಾತನ್ನು ದೇಶದ ಜನ ಸೀರಿಯಸ್ ಆಗಿ ಪರಿಗಣಿಸುತ್ತಿಲ್ಲ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟಾಂಗ್ - kannada newspaper
ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಉನ್ನತ ಮಟ್ಟದ ನಾಯಕರೇ ಒಪ್ಪಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಭಾಷಣ ಮಾಡಲು ವಿಷಯವಿಲ್ಲದೆ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ರವಿಕುಮಾರ್, ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಉನ್ನತ ಮಟ್ಟದ ನಾಯಕರೇ ಒಪ್ಪಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಭಾಷಣ ಮಾಡಲು ವಿಷಯವಿಲ್ಲದೆ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದರು.
ಯಡಿಯೂರಪ್ಪ ಅವರ ಡೈರಿ ಸಿಕ್ಕಿದೆ. ಅದರಲ್ಲಿ ಬಿಜೆಪಿ ಹೈಕಮಾಂಡ್ ನಾಯಕರಿಗೆ ಕಪ್ಪ ನೀಡಿರುವುದಾಗಿ ಬರೆದಿದೆ ಎಂದು ಹೇಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಡೈರಿ ಕುರಿತು ಈಗಾಗಲೇ ಐಟಿ ಇಲಾಖೆ ಸ್ಪಷ್ಟಪಡಿಸಿದೆ. ಆದರು ರಾಹುಲ್ ಗಾಂಧಿ ಪದೇ ಪದೆ ಇದನ್ನೆ ಹೇಳಿಕೊಂಡು ತಿರುಗುತ್ತಿದ್ದಾರೆ. ರಾಹುಲ್ ಗಾಂಧಿ ಪರಿಸ್ಥಿತಿ ಹೇಗಾಗಿದೆ ಎಂದರೆ ದೇಶದಲ್ಲಿ ಅವರ ಮಾತನ್ನು ಯಾರು ನಂಬದಂತಾಗಿದೆ. ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲಿಸುವುದಾಗಿಯೂ ತಿಳಿಸಿದರು.