ಕಲಬುರಗಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಲಬುರಗಿಯಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಾರ್ವಜನಿಕ ಉದ್ಯಾನವನದಲ್ಲಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಶೋಭಾ ಸಿದ್ದು ಶಿರಸಿ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಬೇಕೆಂದು ಕರೆ ಕೊಟ್ಟರು. ಹೆಣ್ಣುಮಕ್ಕಳ ಅಭ್ಯುದಯಕ್ಕಾಗಿ ಅನೇಕ ಯೋಜನೆಗಳು ರೂಪುಗೊಂಡಿವೆ. ಅವುಗಳ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಅಂದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಹೆಣ್ಣು ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪೂ ಮೂಡಿಸುತ್ತಿದ್ದಾಳೆ. ತಾನು ಯಾವುದೇ ಕಾರಣಕ್ಕೂ ದುರ್ಬಲಳು ಅಲ್ಲ ಎಂದು ತಿಳಿದು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.
ಇದೆ ವೇಳೆ ಭಾಗ್ಯಲಕ್ಮಿ ಬಾಂಡ್ ಸೇರಿದಂತೆ ಹೆಣ್ಣುಮಕ್ಕಳಿಗೆ ಸಂಬಂಧಿಸಿದ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನಾ ನಗರದ ವಿವಿಧ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಜಾಥಾಕ್ಕೆ ಡಿಸಿ ಬಿ.ಶರತ್ ಚಾಲನೆ ನೀಡಿದರು.