ಕಲಬುರಗಿ: ಹಾಥ್ರಾಸ್ನಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಹುಡುಗಿಯ ಮನೆಗೆ ಹೋಗುತ್ತಿದ್ದ ದಾರಿಯಲ್ಲಿ ರಾಹುಲ್ ಗಾಂಧಿಯವರನ್ನ ತಡೆದಿದ್ದಕ್ಕೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯೋಗಿ ಆಡಳಿತದಲ್ಲಿ ಮಹಿಳೆಯರಿಗೆ, ದಲಿತರಿಗೆ ರಕ್ಷಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ ಕಿಡಿ
ಉತ್ತರ ಪ್ರದೇಶದ ಹಾಥ್ರಾಸ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಭೇಟಿ ನೀಡಲು ತೆರಳಿದ್ದ ರಾಹುಲ್ ಗಾಂಧಿಯನ್ನು ತಡೆದಿದ್ದಕ್ಕೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆಯವರು ಯೋಗಿ ಆದಿತ್ಯನಾಥ್ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಈ ಕುರಿತು ಟ್ವೀಟ್ ಮಾಡಿರುವ ಅವರು, ಆದಿತ್ಯನಾಥ್ ಆಡಳಿತ ಅವಧಿಯಲ್ಲಿ ಉತ್ತರಪ್ರದೇಶದ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಮಹಿಳೆಯರು ಹಾಗೂ ದಲಿತರಿಗೆ ರಕ್ಷಣೆಯಿಲ್ಲದಂತಾಗಿದೆ ಎಂದು ಯೋಗಿ ಆದಿತ್ಯನಾಥ್ ಸರ್ಕಾರ ವಿರುದ್ಧ ಛಾಟಿ ಬೀಸಿದ್ದಾರೆ.