ಕರ್ನಾಟಕ

karnataka

ETV Bharat / city

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ: ಜಿ ಪರಮೇಶ್ವರ್ - Maharashtra

ಮೈತ್ರಿ ಸರ್ಕಾರ ರಚಿಸಲು ಸಂವಿಧಾನದಲ್ಲೇ ಅವಕಾಶ ಇದೆ. ಆದರೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ.

ಜಿ ಪರಮೇಶ್ವರ್
ಜಿ ಪರಮೇಶ್ವರ್

By

Published : Jun 25, 2022, 8:38 PM IST

ಕಲಬುರಗಿ: ಯಾವುದೇ ಪಕ್ಷಕ್ಕೆ ಬಹುಮತ ಬರದೇ ಇದ್ದ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸುವುದು ಸಾಮಾನ್ಯ. ಇದಕ್ಕೆ ದೇಶದ ಸಂವಿಧಾನದಲ್ಲಿಯೇ ಅವಕಾಶ ಇದೆ. ಅದಕ್ಕಾಗಿ ಎನ್.ಸಿ.ಪಿ, ಶಿವಸೇನೆ ಮತ್ತು ಕಾಂಗ್ರೆಸ್ ಸೇರಿ ಸರ್ಕಾರ ರಚನೆ ಮಾಡಿವೆ. ಆದರೆ, ಆಂತರಿಕವಾಗಿ ಇದಕ್ಕೆ ಪ್ರಚೋದನೆ ಮಾಡಿ ಸರಕಾರ ಬೀಳಿಸುವುದು ಬಿಜೆಪಿಯ ವ್ಯವಸ್ಥಿತವಾದ ಸಂಚು ನಡೆಸಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ ಪರಮೇಶ್ವರ್ ಆರೋಪಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಡೆಯುವುದಕ್ಕಾಗಿ ಅವರು ನಡೆಸಿರುವ ಪ್ರಯತ್ನ ಮಹಾರಾಷ್ಟ್ರದ ಜನ, ದೇಶದ ಜನ ಮರೆತಿಲ್ಲ. ಇದನ್ನು ತಡೆಯಲು ಚುನಾವಣಾ ಕಾಯ್ದೆಗಳಲ್ಲಿ ತಿದ್ದುಪಡಿ ತರುವ ಅಗತ್ಯವಿದೆ. ಇಡೀ ದೇಶದಲ್ಲಿಯೇ ಇದನ್ನ ಚರ್ಚೆಮಾಡಿ ದೊಡ್ಡ ಬದಲಾವಣೆ ತರಬೇಕಾಗಿದೆ. ಇಲ್ಲದಿದ್ದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಅಗೋದಿಲ್ಲ ಎಂದರು.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ: ಜಿ. ಪರಮೇಶ್ವರ್​

ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ:ಮುಂದಿನ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಿದೆ ಎಂದು ಡಿಕೆ ಶಿವಕುಮಾರ್ ಹೀಗಾಗಲೇ ಹೇಳಿದ್ದಾರೆ. ಅವರು ಹೇಳಿದಂತೆ ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲೇ ಸಮರ್ಥವಾಗಿ ಎದುರಿಸುತ್ತೇವೆ. ನನಗೆ ಪಕ್ಷದಲ್ಲಿ ಸ್ಥಾನಮಾನ ಇಲ್ಲ ಎಂಬ ಬೇಸರ ‌ಇದೆ ಎಂಬುದು ಸುಳ್ಳು. ಸತತ ಎಂಟು ವರ್ಷ ಪಕ್ಷದ ಅಧ್ಯಕ್ಷನಾಗಿ ನಂತರ ಪಕ್ಷದ ಅಧಿಕಾರಿದಲ್ಲಿರುವಾಗ ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಹಾಗಾಗಿ ನನಗೆ ಯಾವುದೇ ಬೇಸರ ಇಲ್ಲ ಎಂದು ಜಿ. ಪರಮೇಶ್ವರ್​ ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಬಂಡಾಯ ಶಾಸಕರು ಅಪೇಕ್ಷಿಸಿದರೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ: ಸದಾನಂದ ಗೌಡ

ABOUT THE AUTHOR

...view details