ಕರ್ನಾಟಕ

karnataka

ETV Bharat / city

ಆಪರೇಷನ್ ಕಮಲ ಆಡಿಯೋ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ - ಕಲಬುರಗಿ ಹೈಕೋರ್ಟ್ ಪೀಠ

ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಇಂದು ನಡೆಯಬೇಕಿದ್ದ ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ವಾರ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು.

ವಿಶೇಷ ನ್ಯಾಯಾಲಯ
ವಿಶೇಷ ನ್ಯಾಯಾಲಯ

By

Published : Jan 27, 2021, 2:00 PM IST

ಕಲಬುರಗಿ: ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಜನಪ್ರತಿನಿಧಿಗಳಿಗಾಗಿಯೇ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದ್ದು, ಈ ಹಿನ್ನೆಲೆ ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು ಅಲ್ಲಿಗೆ ವರ್ಗಾವಣೆ ಮಾಡಿದೆ.

ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದಿನ ವಾರ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಿ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ಪಾಟೀಲ ಕಂದಕೂರ ದೂರು ನೀಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿದಾಗ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು.

ನಂತರ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರ ಮೇಲ್ಮನವಿ ಸಲ್ಲಿಸಿದ್ದಾರೆ. ಆಪರೇಷನ್ ಕಮಲ ಆಡಿಯೋ ಪ್ರಕರಣ ದಾಖಲಾಗಿದ್ದಾಗ ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿದ್ದರು.

ABOUT THE AUTHOR

...view details