ಕಲಬುರಗಿ:ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕಲಬುರಗಿ ಮಹಾನಗರ ಪಾಲಿಕೆ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ದಂಡ ವಿಧಿಸಲು ಮುಂದಾಗಿದೆ. ಸಾರ್ವಜನಿಕ ಸ್ಥಳದಲ್ಲಿ ತಿರುಗಾಡುವವರು ಹಾಗೂ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.
ಓದಿ: ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್ ಪುಂಡ : ಬೆಳಗಾವಿಯಲ್ಲಿ ನಾಡದ್ರೋಹಿಯ ಉದ್ಧಟತನ
ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಪಾಲಿಕೆ ಹೂಸ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಶಾಪಿಂಗ್ ಮಾಲ್, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್, ವಾಣಿಜ್ಯ ಅಂಗಡಿ-ಮುಂಗಟ್ಟುಗಳಿರುವ ಸ್ಥಳದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ಪ್ರವೇಶ ನಿಷೇಧಿಸಿ ಎಂದು ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ.