ಕಲಬುರಗಿ :ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ವಿವಾದದ ಬಗ್ಗೆ ಮಾತನಾಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 144 ಸೆಕ್ಷನ್ ಹಾಕಿ ಪೂಜೆಗೆ ಅವಕಾಶ ನೀಡದಿರುವುದು ಸರಿಯಲ್ಲ.
ಮೈಕ್ ಹಾಕಿ ನಮಾಜ್ ಮಾಡಲು ಅವರಿಗೆ ಅವಕಾಶ ಕೊಟ್ಟಂತೆ ನಮಗೂ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಪುರಾತತ್ವ ಇಲಾಖೆ ಸುಪರ್ದಿಯಲ್ಲಿದ್ದು, ಅನುಮತಿ ನಿಷೇಧವಿದ್ದರೂ ಒಳಗಡೆ ಅತಿಕ್ರಮ ಪ್ರವೇಶ ಮಾಡಲಾಗುತ್ತಿದೆ. ಪುರಾತತ್ವ ಇಲಾಖೆಯವರನ್ನು ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು.