ಕಲಬುರಗಿ:ಮೂರು ದಶಕಗಳ ನಂತರ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಾಹಿತ್ಯಾಸಕ್ತರು ದಾಖಲೆ ಪ್ರಮಾಣದಲ್ಲಿ ನೋಂದಣಿ ಮಾಡಿಸಿದ್ದಾರೆ. ಅವರೆಲ್ಲರಿಗೂ ಅಗತ್ಯ ವಸತಿ ಹಾಗೂ ಸಾರಿಗೆ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಾಹಿತ್ಯ ಸಮ್ಮೇಳನದ ಸಾರಿಗೆ ಮತ್ತು ವಸತಿ ಸಮಿತಿ ಅಧ್ಯಕ್ಷ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಮ್ಮೇಳನಕ್ಕೆ ಆಗಮಿಸುವ ನೋಂದಾಯಿತ ಗಣ್ಯರಿಗೆ, ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳಿಗೆ ಸೂಕ್ತ ರೀತಿಯಲ್ಲಿ ವಸತಿ ಸೌಕರ್ಯ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ, ರಾಜ್ಯದ ವಿವಿಧ ಭಾಗಗಳಿಂದ ನುಡಿ ತೇರು ಎಳೆಯಲು ಆಗಮಿಸುವ ಕನ್ನಡಾಭಿಮಾನಿಗಳಿಗೆ ವಸತಿ ಮತ್ತು ಕಾರ್ಯಕ್ರಮಕ್ಕೆ ತೆರಳಲು ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.
ವಸತಿ ವ್ಯವಸ್ಥೆ:
ನುಡಿ ಜಾತ್ರೆಗೆ 22, 212 ಪ್ರತಿನಿಧಿಗಳು ನೋಂದಣೆ ಮಾಡಿಕೊಂಡಿದ್ದು, ವಸತಿಗಾಗಿ 60 ಹೊಟೇಲ್‍ಗಳಲ್ಲಿ 762 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಇನ್ನುಳಿದಂತೆ ಕಲ್ಯಾಣ ಮಂಟಪ, ಶಾಲಾ, ಕಾಲೇಜು, ವಸತಿ ನಿಲಯಗಳು ಮತ್ತು ಸರ್ಕಾರಿ ಅತಿಥಿ ಗೃಹಗಳಲ್ಲಿ ಮತ್ತು ಲಾಡ್ಜ್ಗಳಲ್ಲಿ ಗಣ್ಯರು, ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಮೊಬೈಲ್ ಸಂಖ್ಯೆ ನೋಂದಾಯಿತ ಪ್ರತಿನಿಧಿಗಳಿಗೆ ಕೋಣೆ ಕಾಯ್ದಿರಿಸಿದ ಮಾಹಿತಿ ನೀಡಲಾಗುತ್ತಿದೆ.
ಸಾರಿಗೆ ವ್ಯವಸ್ಥೆ: