ಕಲಬುರಗಿ:ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ದಿವ್ಯಾ ಹಾಗರಗಿಯನ್ನು ಇಂದು ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ಸಿಐಡಿ ಕಸ್ಟಡಿಯ ಕಾಲಾವಕಾಶ ಮುಕ್ತಾಯವಾಗಿದ್ದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ನಂತರ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗುತ್ತದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ 18 ದಿನಗಳ ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಬಂಧನಕ್ಕೊಳಗಾಗಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೆಚ್ಚಿನ ವಿಚಾರಣೆಗಾಗಿ 11 ದಿನ ಸಿಐಡಿ ಕಸ್ಟಡಿಗೆ ಪಡೆದಿತ್ತು. ಬಹುತೇಕ ವಿಚಾರಣೆ ಮುಕ್ತಾಯವಾಗಿದ್ದು ಮತ್ತೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗುತ್ತಿದೆ.