ಕಲಬುರಗಿ:ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಥಳಕು ಹಾಕಿಕೊಳ್ಳುತ್ತಿದೆ. ಸಿಐಡಿ ಅಧಿಕಾರಿಗಳು ಸಾಕ್ಷ್ಯ ಸಂಗ್ರಹದಲ್ಲಿ ತೊಡಗಿದ್ದಾರೆ. ಓರ್ವ ಅಧಿಕಾರಿಯನ್ನು ಕರೆತಂದು ವಿಚಾರಣೆ ಕೂಡಾ ನಡೆಸಲಾಗುತ್ತಿದೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ದೊಡ್ಡ ದೊಡ್ಡ ತಿಮಿಂಗಿಲಗಳ ಕೈವಾಡ ಇರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
ಮಧ್ಯವರ್ತಿಗಳಂತೆ ಆರೋಪಿ ಪೊಲೀಸ್ ಕಾನ್ಸ್ಟೇಬಲ್ ರುದ್ರಗೌಡ ಪಾಟೀಲ್ಗೆ ಅಭ್ಯರ್ಥಿಗಳನ್ನು ಭೇಟಿ ಮಾಡಿಸಿ ಹಣ ಕೂಡಾ ಅಧಿಕಾರಿಗಳೇ ಸಂದಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಸದ್ಯ ಸಿಐಡಿ ಅಧಿಕಾರಿಗಳ ಅಕ್ರಮ ಕುರಿತಾಗಿ ಸಾಕ್ಷ್ಯ ಸಂಗ್ರಹದಲ್ಲಿ ತೊಡಗಿದ್ದು, ಓರ್ವ ಅಧಿಕಾರಿಯ ಕರೆ ತಂದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಯೊಬ್ಬರ ಮೊಬೈಲ್ ವಶಕ್ಕೆ ಪಡೆದು ಸಾಕ್ಷ್ಯ ಕಲೆ ಹಾಕಲಾಗುತ್ತಿದ
ಟ್ರೈನಿ ಪಿಎಸ್ಐ ವಿಚಾರಣೆ:ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತರಬೇತಿಯಲ್ಲಿರುವ ಕೆಎಸ್ಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಯಶವಂತಗೌಡ ಎಂಬುವವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಮೂಲದ ಯಶವಂತಗೌಡ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬೆಂಗಳೂರಿನಲ್ಲಿ ಪಾಸ್ ಆಗಿದ್ದ. ಕಳೆದ 22ರಂದು ಬೆಂಗಳೂರಿನ ಸಿಐಡಿ ಕಚೇರಿಗೆ ದಾಖಲಾತಿ ಪರಿಶೀಲನೆಗೆ ತೆರಳಿದ್ದ, ದಾಖಲಾತಿ ಪರಿಶೀಲನೆ ಮುಗಿಸಿ ವಾಪಸ್ ಆಗಿದ್ದ ಯಶವಂತ್ ಗೌಡ ಕಳೆದ ಎಂಟು ದಿನಗಳ ಹಿಂದೆ ಕಲಬುರಗಿಯ ಕಲಬುರಗಿ ಪಿಟಿಸಿಗೆ ಆಗಮಿಸಿದ್ದ. ಸದ್ಯ ಆತನನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ವಿಚಾರಣೆಯನ್ನು ಮುಂದುವರೆಸಿದ್ದಾರೆ.