ಕಲಬುರಗಿ: ಪ್ರಿಯಾಂಕ್ ಖರ್ಗೆ ಟೀಕಿಸುವ ಬರದಲ್ಲಿ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಆಡಿದ ಮಾತುಗಳು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಪ್ರಿಯಾಂಕ್ ಖರ್ಗೆ ಅಭಿಮಾನಿಗಳು ತೇಲ್ಕೂರ್ಗೆ ಕರೆ ಮಾಡಿ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದರು. ಇದರಿಂದ ಎಚ್ಚೆತ್ತ ತೇಲ್ಕೂರ್, ತಾವು ಆಡಿದ ಮಾತಿನ ಬಗ್ಗೆ ವಿಷಾದ ವ್ಯಕ್ತಪಡಿಸಿ ಈ ವಿಚಾರ ಕೈಬಿಡುವಂತೆ ಮನವಿ ಮಾಡಿದ್ದಾರೆ.
ಇತ್ತಿಚೀಗೆ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರ ಲಂಚ ಮಂಚದ ಸರ್ಕಾರ, ಯುವಕರು ಉದ್ಯೋಗ ಪಡೆಯಬೇಕಾದರೆ ಲಂಚ ಕೊಡಬೇಕು. ಯುವತಿಯರು ಉದ್ಯೋಗ ಪಡೆಯಬೇಕಾದರೆ ಮಂಚ ಹಂತಬೇಕು ಎಂಬ ವಿವಾದಾತ್ಮಕ ಹೇಳಿಕೆ ಮೂಲಕ ಸರ್ಕಾರವನ್ನು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರ ಕೊಡುವ ಭರಾಟೆಯಲ್ಲಿ ಪ್ರಿಯಾಂಕ್ ಖರ್ಗೆ ಸಹೋದರಿಯರು ಹೀಗೆ ಹುದ್ದೆ ಪಡೆದಿದ್ದಾರಾ? ಎಂದು ವಿವಾದಾತ್ಮಕವಾಗಿ ರಾಜಕುಮಾರ ಪಾಟೀಲ್ ತೇಲ್ಕೂರ್ ಹೇಳಿಕೆ ನೀಡಿದ್ದರು.