ಕರ್ನಾಟಕ

karnataka

ETV Bharat / city

ಬೆಲೆ ಏರಿಕೆಯಿಂದ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ : ರಂದೀಪ್ ಸಿಂಗ್ ಸುರ್ಜೇವಾಲಾ - kalaburagi latest news

ಮೋದಿ ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿ ಮಾಡಿಲ್ಲ. ನಾವು ಪಂಜಾಬ್‌ನಲ್ಲಿ ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡುತ್ತಿದ್ದೇವೆ. ಮೋದಿ ಆಡಳಿತದಿಂದ ದೇಶದ ಜನ ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬದಲಾವಣೆ ಖಚಿತ..

Randeep Singh Surjewala
ರಂದೀಪ್ ಸಿಂಗ್ ಸುರ್ಜೇವಾಲಾ

By

Published : Oct 19, 2021, 2:36 PM IST

ಕಲಬುರಗಿ: ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ‌ ಸರ್ಕಾರ ಬೆಲೆ ಏರಿಕೆಯಿಂದ ಜನರನ್ನು ಲೂಟಿ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ರಂದೀಪ್ ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿರುವುದು..

ಕಲಬುರಗಿ ವಿಮಾನ ನಿಲ್ದಾಣದಲ್ಲಿ‌ ಮಾತನಾಡಿದ ಅವರು, ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಕಾಲಿನಿಂದ ತಲೆವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ ಬೆಲೆ ಏರಿಕೆ ಮೂಲಕ ಜನರನ್ನು ಕೊಳ್ಳೆ ಹೊಡೆಯುತ್ತಿದೆ.

ಅನಿಲ ಬೆಲೆ, ಅಗತ್ಯ ವಸ್ತುಗಳ ಬೆಲೆ ನೋಡಿದ್ರೆ ಇವರ ಲೂಟಿ ಬಗ್ಗೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಸದ್ಯ ವಿದೇಶದ ತೊಗರಿ ಬೇಳೆ ದೇಶಕ್ಕೆ ಬರಲಿದೆ. ನಮ್ಮ ದೇಶದ ರೈತರ ಬೇಳೆ ಮಾರಾಟ ಆಗದು. ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.

ಕೇಂದ್ರ, ರಾಜ್ಯದಲ್ಲಿ ಬದಲಾವಣೆ ಖಚಿತ :ಮೋದಿ ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿ ಮಾಡಿಲ್ಲ. ನಾವು ಪಂಜಾಬ್‌ನಲ್ಲಿ ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡುತ್ತಿದ್ದೇವೆ. ಮೋದಿ ಆಡಳಿತದಿಂದ ದೇಶದ ಜನ ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬದಲಾವಣೆ ಖಚಿತ ಎಂದು ಹೇಳಿದರು.

ಇದನ್ನೂ ಓದಿ:45ರ ವರ 25ರ ವಧುವಿನ ವಿವಾಹ: ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡ್ತಿರೋ ಜೋಡಿಯ ಕಥೆ ಸ್ವಾರಸ್ಯಕರ

ಸೋನಿಯಾ ಗಾಂಧಿಗೆ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಸುರ್ಜೇವಾಲಾ, ಕಾಂಗ್ರೆಸ್ ಒಂದು ಕುಟುಂಬ, ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯಲು ಮುಕ್ತ ಅವಕಾಶ ಇದೆ. ಪಕ್ಷದ ಯಾರೇ ಕಾರ್ಯಕರ್ತರು ಸೋನಿಯಾ ಗಾಂಧಿಗೆ ಪತ್ರ ಬರೆಯಬಹುದು. ತಮ್ಮ ಅಭಿಪ್ರಾಯ ಸೋನಿಯಾ ಗಾಂಧಿಗೆ ತಿಳಿಸೋದ್ರಲ್ಲಿ ತಪ್ಪೇನಿಲ್ಲ ಎಂದರು.

ABOUT THE AUTHOR

...view details