ಕಲಬುರಗಿ: ಕಾಳ ಸಂತೆಯಲ್ಲಿ ರೆಮ್‌ಡೆಸಿವಿರ್ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಡ್ರಗ್ ಕಂಟ್ರೋಲರ್ ಹಾಗೂ ಪೊಲೀಸರು ಸಿಬ್ಬಂದಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ : ಕಲಬುರಗಿಯಲ್ಲಿ ಇಬ್ಬರ ಬಂಧನ
ಒಂದೆಡೆ ರೆಮ್ಡಿಸಿವಿರ್ ಅಭಾವ ಇದ್ರೆ, ಇನ್ನೊಂದೆಡೆ ಕಾಳಸಂತೆಯಲ್ಲಿ ಅದನ್ನೇ ದಂಧೆಯಾಗಿಸಿಕೊಂಡು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ. ಈ ಸಂಬಂಧ ಕಲಬುರಗಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
remidisever
ನಗರದ ನವಜೀವನ್ ಬ್ಲಡ್ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ ಮಠಪತಿ(26) ಹಾಗೂ ಸಾಜೀದ್ ಕೂಡಿ (22) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ರೆಮ್‌ಡೆಸಿವಿರ್ ಅಭಾವದ ಕಾರಣ 22 ಸಾವಿರ ರೂಪಾಯಿಗೆ ಒಂದರಂತೆ ಮಾರಾಟ ಮಾಡಲು ಯತ್ನಿಸುತ್ತಿರುವಾಗ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ರೆಮ್‌ಡೆಸಿವಿರ್ ಇಂಜೆಕ್ಷನ್ ವಶಪಡಿಸಿಕೊಳ್ಳಲಾಗಿದೆ ಎಂದು ಎಎಸ್ಪಿ ಅಂಶುಕುಮಾರ ತಿಳಿಸಿದ್ದಾರೆ.