ಕರ್ನಾಟಕ

karnataka

ETV Bharat / city

ಆರ್ಟಿಕಲ್​ 370 ವಾಪಸ್​.. ರಾಜ್ಯದ ವಿವಿಧೆಡೆ ಬಿಜೆಪಿ ಬೆಂಬಲಿಗರ ಸಂಭ್ರಮಾಚರಣೆ - Removal of Article 370

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿ ರಾಜ್ಯದ ವಿವಿಧೆಡೆಗಳಲ್ಲಿ ವಿಜಯೋತ್ಸವ ಆಚರಿಸಲಾಯ್ತು. ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ವಿಜಯಪುರ, ರಾಯಚೂರು, ಕಲಬುರಗಿ ಹಾಗೂ ಬೀದರ್​ನಲ್ಲಿ ಹಿಂದೂ ಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ರಾಜ್ಯದ ವಿವಿಧೆಡೆ ಬಿಜೆಪಿ ಬೆಂಬಲಿಗರ ಸಂಭ್ರಮಾಚರಣೆ

By

Published : Aug 5, 2019, 9:46 PM IST

ವಿಜಯಪುರ/ ರಾಯಚೂರು/ ಕಲಬುರಗಿ/ ಬೀದರ್ :ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್​ 370ರ ಮೂಲಕ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ವಿಜಯಪುರದಲ್ಲಿ ಬಿಜೆಪಿ ಮುಖಂಡರ ವಿಜಯೋತ್ಸವ..

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸಿ ವಿಜಯಪುರದಲ್ಲಿ ಬಿಜೆಪಿ ಮುಖಂಡರು ವಿಜಯೋತ್ಸವ ಆಚರಿಸಿದರು. ನಗರದ ಶಿವಾಜಿ ಚೌಕ್‌ನಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ, ಕೇಂದ್ರ ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಜಗದೀಶ ಹಿರೇಮನಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.

ರಾಯಚೂರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ..

ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಕೇಂದ್ರ ಗೃಹಮಂತ್ರಿ ಅಮಿತ್ ಷಾ, ಪ್ರಧಾನಿ ಮೋದಿ ಪರ ಘೋಷಣೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದಿಂದ ಭಯೋತ್ಪಾದನೆ ಚಟುವಟಿಕೆಗಳು ಹಾಗೂ ಬೇರೆ ಭಾಗದ ಜನರು ಸ್ವಾತಂತ್ರವಾಗಿರಲು ಅಸಾಧ್ಯವಾಗಿತ್ತು. ಇದನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ಪೋಷಿಸುತ್ತಾ ಬಂದಿದ್ದು, ಬಿಜೆಪಿ ಸರ್ಕಾರ ವಿಶೇಷ ಸ್ಥಾನಮಾನ ರದ್ದು ಮಾಡುವ ಮೂಲಕ ಒಳ್ಳೆಯ ಬೆಳವಣಿಗೆಗೆ ನಾಂದಿ ಹಾಡಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ವಿವಿಧೆಡೆ ಬಿಜೆಪಿ ಬೆಂಬಲಿಗರ ಸಂಭ್ರಮಾಚರಣೆ

ಕಲಬುರಗಿಯಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮ...

ಜಮ್ಮು-ಕಾಶ್ಮೀರದ ಬಗ್ಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು. ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ್ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು, ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರ ಘೋಷಣೆಗಳನ್ನು ಕೂಗಿ ವಿಜಯೋತ್ಸವ ಆಚರಣೆ ಮಾಡಿದರು.

ಬೀದರ್​ನಲ್ಲಿ ವಿಜಯೋತ್ಸವ..

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರಕ್ಕಾಗಿ ಬೀದರ್​ನಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದವು. ನಗರದ ಕೆಇಬಿ ರಸ್ತೆಯಲ್ಲಿರವ ಆಂಜನೇಯ ದೇವಸ್ಥಾನ ಬಳಿ ಜಮಾಯಿಸಿದ ಭಜರಂಗದಳ, ವಿಶ್ವ ಹಿಂ ಪರಿಷತ್ ಹಾಗೂ ಶ್ರೀರಾಮ ಸೇನಾ ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಾಚರಣೆ ಮಾಡಿದರು.ಸಂವಿಧಾನದ ವಿಶೇಷ ಸ್ಥಾನಮಾನ ಹೆಸರಿನಲ್ಲಿ ದೇಶದ ಐಕ್ಯತೆ ಹಾಗೂ ಭದ್ರತೆಗೆ ಮಾರಕವಾದ ಅಂಶವನ್ನು ಕೇಂದ್ರ ಸರ್ಕಾರ ರದ್ದು ಪಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ABOUT THE AUTHOR

...view details