ಕಲಬುರಗಿ :ಸ್ವಾಮೀಜಿಗಳು ತೆಲೆ ಮೇಲೆ ಬಟ್ಟೆ ಹಾಕಿಕೊಳಲ್ವಾ? ಅವರನ್ನು ಯಾರಾದ್ರೂ ಪ್ರಶ್ನೆ ಮಾಡ್ತೀರಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಹಿಜಾಬ್ ಮತ್ತು ಸ್ವಾಮೀಜಿಗಳ ವಸ್ತ್ರವನ್ನು ಒಂದೇ ತಕ್ಕಡಿಯಲ್ಲಿ ಇಡಬಾರದು. ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಲೇ ಮಠಾಧೀಶರಿಗೆ ಕ್ಷಮೆ ಕೇಳಬೇಕು : ಸಿದ್ದಲಿಂಗ ಸ್ವಾಮೀಜಿ
ಹಿಜಾಬ್ ಕಡ್ಡಾಯವಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೂ ಹಿಂದು ಧರ್ಮ ಹಾಗೂ ಸಂಸ್ಕೃತಿಯನ್ನು ಹೀಯಾಳಿಸುವುದು ಅವರ ಕೆಟ್ಟಚಟ. ಕೂಡಲೇ ಸಿದ್ದರಾಮಯ್ಯ ಅವರು ಮಠಾಧೀಶರಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು..
ಶ್ರೀರಾಮ ಸೇನೆ ರಾಜ್ಯಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ
ಸಿದ್ದರಾಮಯ್ಯ ಅವರು ಹಿಜಾಬ್ ವಿವಾದವನ್ನು ಮಠಗಳಿಗೆ ತಂದು ನಿಲ್ಲಿಸಿದ್ದಾರೆ. ಇದು ಅತ್ಯಂತ ಖಂಡನೀಯವಾಗಿದೆ. ಮಠಾಧೀಶರ ಸಮೂಹಕ್ಕೆ ಅವಮಾನಿಸಿದ್ದಾರೆ. ಹಿಜಾಬ್ ಕಡ್ಡಾಯವಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೂ ಹಿಂದು ಧರ್ಮ ಹಾಗೂ ಸಂಸ್ಕೃತಿಯನ್ನು ಹೀಯಾಳಿಸುವುದು ಅವರ ಕೆಟ್ಟಚಟ. ಕೂಡಲೇ ಸಿದ್ದರಾಮಯ್ಯ ಅವರು ಮಠಾಧೀಶರಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಸಿದ್ದರಾಮಯ್ಯ ರಾಜಕೀಯ ಅಂತ್ಯಕ್ಕೆ ಬಂದಿದೆ.. ಹಿಂದೂ ಸಮಾಜ ನಿಮ್ಮನ್ನು ಮೂಲೆಗುಂಪು ಮಾಡುತ್ತೆ.. ಮುತಾಲಿಕ್