ಕರ್ನಾಟಕ

karnataka

ETV Bharat / city

ಸಿ.ಎಂ. ಇಬ್ರಾಹಿಂ ಪಕ್ಷ ತೊರೆದ್ರೆ ಪಕ್ಷಕ್ಕೆ ಏನೂ ತೊಂದರೆ ಇಲ್ಲ: ಆಪ್ತನ ಕೈಬಿಟ್ಟ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷಕ್ಕೆ ಅನೇಕರು ಸೇರುತ್ತಾರೆ, ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಇದರಿಂದ ಪಕ್ಷಕ್ಕೆ ಏನೂ ತೊಂದರೆ ಆಗಲ್ಲ. ಸಿಎಂ ಇಬ್ರಾಹಿಂ ಪಕ್ಷ ಬಿಟ್ಟು ಹೋದ್ರು ಕೂಡ ಏನೂ ತೊಂದರೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Siddaramaiah
ವಿಪಕ್ಷ ನಾಯಕ ಸಿದ್ದರಾಮಯ್ಯ

By

Published : Mar 12, 2022, 4:42 PM IST

Updated : Mar 12, 2022, 4:59 PM IST

ಕಲಬುರಗಿ: ವಿಧಾನಪರಿಷತ್​ ಸದಸ್ಯ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷ ತೊರೆಯೋದರಿಂದ ಪಕ್ಷಕ್ಕೆ ಏನೂ ತೊಂದರೆ ಆಗಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತನಾಗಿದ್ದ ಸಿ.ಎಂ ಇಬ್ರಾಹಿಂ ಅವರನ್ನು ಕೈ ಬಿಟ್ಟಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ

ಇಲ್ಲಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಅನೇಕರು ಸೇರುತ್ತಾರೆ, ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಇದರಿಂದ ಪಕ್ಷಕ್ಕೆ ಏನೂ ತೊಂದರೆ ಆಗಲ್ಲ. ಸಿ.ಎಂ. ಇಬ್ರಾಹಿಂ ಪಕ್ಷ ಬಿಟ್ಟು ಹೋದ್ರು ಕೂಡ ಯಾವುದೇ ತೊಂದರೆ ಇಲ್ಲ, ಇಬ್ರಾಹಿಂ ನನಗೆ ಮೊದಲು ಸ್ನೇಹಿತ‌, ಮುಂದೆಯೂ ಸ್ನೇಹಿತನಾಗಿ ಇರುತ್ತಾರೆ. ಆದ್ರೆ ಅವರ ರಾಜೀನಾಮೆಯಿಂದ ಪಕ್ಷಕ್ಕೆ ತೊಂದರೆ ಆಗಲ್ಲ ಎಂದು ಹೇಳಿದರು.

ಇದನ್ನೂ ಓದಿ:ನಾನು ಮತ್ತೆ ಸಂಪುಟ ಸೇರಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟೋಕ್ತಿ

ಯಾರ ರಾಜೀನಾಮೆಯಿಂದಲೂ ಪಕ್ಷಕ್ಕೆ ಯಾವುದೇ ಪರಿಣಾಮ ಆಗಲ್ಲ. ನಾನು ಪಕ್ಷ ಬಿಟ್ರು ಕೂಡ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದರು.

Last Updated : Mar 12, 2022, 4:59 PM IST

ABOUT THE AUTHOR

...view details