ಕಲಬುರಗಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೆಲ ವಿದ್ಯಾರ್ಥಿಗಳು ತಮ್ಮ ಬದಲಿಗೆ ಮತ್ತೊಬ್ಬರನ್ನು ಪರೀಕ್ಷೆಗೆ ಕೂರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಹಾಗೂ ಪರೀಕ್ಷೆಗೆ ಕುಳಿತ ನಕಲಿ ಅಭ್ಯರ್ಥಿಗಳ ವಿರುದ್ಧವೂ ಎಫ್‍ಐಆರ್ ದಾಖಲಿಸಲು ಡಿಡಿಪಿಐಗೆ ಶಿಕ್ಷಣ ಇಲಾಖೆ ಉಪ ಆಯುಕ್ತ ನಳೀನ್ ಅತುಲ್ ಸೂಚಿಸಿದ್ದಾರೆ.
ಕಲಬುರಗಿಯಲ್ಲಿ ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಸಿದ SSLC ವಿದ್ಯಾರ್ಥಿಗಳು! - ಕಲಬುರಗಿ ಎಸ್ಎಸ್ಎಲ್ಸಿ ಪರೀಕ್ಷೆ
ಗುರುವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಡೆಸಿದ ಕಣ್ಣಾಮುಚ್ಚಾಲೆ ಆಟ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 14 ವಿದ್ಯಾರ್ಥಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಕೇಸ್ ದಾಖಲಿಸುವಂತೆ ಕಲಬುರಗಿ ಶಿಕ್ಷಣ ಇಲಾಖೆಯ ಉಪ ಆಯುಕ್ತ ನಳೀನ್ ಅತುಲ್ ಆದೇಶಿಸಿದ್ದಾರೆ.

ಏಳು ವಿದ್ಯಾರ್ಥಿಗಳು ತಮ್ಮ ಬದಲು ನಕಲಿ ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸಿರುವುದು, ಆಯುಕ್ತ ನಳೀನ್ ಅತುಲ್ ಪರೀಕ್ಷಾ ಕೇಂದ್ರಕ್ಕೆ ಖುದ್ದು ಭೇಟಿ ನೀಡಿದಾಗ ಬಹಿರಂಗವಾಗಿದೆ. ಕಲಬುರಗಿ ತಾಲೂಕಿನ ಕೋಟನೂರ (ಡಿ) ಗ್ರಾಮದ ಸೇಂಟ್ ಮೇರಿ ಪ್ರೌಢ ಶಾಲೆಯ ಕೇಂದ್ರದಲ್ಲಿ ನಾಲ್ವರು ಹಾಗೂ ಕಲಬುರಗಿ ನಗರದ ಜೇವರ್ಗಿ ಕಾಲೊನಿಯ ಸರ್ಕಾರಿ ಪ್ರೌಢ ಶಾಲೆಯ ಕೇಂದ್ರದಲ್ಲಿ ಮೂವರು ಅಭ್ಯರ್ಥಿಗಳು ತಮ್ಮ ಬದಲಿಗೆ ಬೇರೊಬ್ಬರನ್ನು ಕೂರಿಸಿ ಪರೀಕ್ಷೆ ಬರೆಸಿದ್ದಾರೆ ಎನ್ನಲಾಗಿದೆ.