ಕಲಬುರಗಿ: ಬರ ನಿರ್ವಹಣೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ದಿವ್ಯ ನಿರ್ಲಕ್ಷ್ಯ ವಹಿಸಿವೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಆರೋಪಿಸಿದ್ದಾರೆ.
ಬರ ನಿರ್ವಹಣೆಯಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳ ನಿರ್ಲಕ್ಷ್ಯ: ಸುಂದರೇಶ್ - Kalburgi
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿವೆ. ಸಮರ್ಪಕ ಅನುದಾನ ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಈಗಲೂ ಭೀಕರ ಬರ ಪರಿಸ್ಥಿತಿ ಇದೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿವೆ. ಸಮರ್ಪಕ ಅನುದಾನ ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದವರಿಗೂ ಕೂಲಿ ಪಾವತಿಸದೇ ನಿರ್ಲಕ್ಷ್ಯ ವಹಿಸಿದೆ ಎಂದರು.
ರಾಜ್ಯ ಸರ್ಕಾರವೂ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಜುಲೈ 15ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಸಾತಿ ಸುಂದರೇಶ್ ತಿಳಿಸಿದರು.
TAGGED:
Kalburgi