ಕಲಬುರಗಿ:ಯುವಕರ ಗುಂಪೊಂದು ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಪೊಲೀಸರ ಮೇಲೆ ಕಲ್ಲು ತೂರಾಡಿರುವ ಜಿಲ್ಲೆಯ ಚಿತ್ತಾಪುರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಅಕ್ರಮವಾಗಿ ಗೋವುಗಳನ್ನ ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇಲೆ ಗೋವುಗಳನ್ನು ರಕ್ಷಿಸಿದ್ದ ಕೆಲ ಯವಕರು, ಗೋವುಗಳನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಅನ್ಯಕೋಮಿನ ಯುವಕರು ಗಲಾಟೆ ಮಾಡಿದ್ದಾರೆ. ಠಾಣೆಯಲ್ಲಿ ಕುಳಿತಿದ್ದ ಗೋವು ರಕ್ಷಿಸಿದ ಯುವಕರನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ಠಾಣೆ ಮುಂಭಾಗದಲ್ಲೇ ಪೊಲೀಸರ ಮೇಲೆ ಕಲ್ಲು ತೂರಾಟ ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಹಲ್ಲೆ ನಿಲ್ಲಿಸಲು ಯತ್ನಿಸಿದ್ದಾರೆ. ಪರಿಸ್ಥಿತಿ ಹತೋಟಿಗೆ ಬರದಿದ್ದಾಗ ಲಾಠಿ ಬೀಸಿದ್ದಾರೆ. ಇದರಿಂದ ಕೋಪಗೊಂಡ ಅನ್ಯಕೋಮಿನ ಯುವಕರ ತಂಡ ಪೊಲೀಸರ ಮೇಲೆ ಹಾಗೂ ಠಾಣೆ ಮೇಲೆ ಕಲ್ಲು ತೂರಾಡಿದ್ದಾರೆಂದು ತಿಳಿದುಬಂದಿದೆ.
ಸ್ಥಳಕ್ಕೆ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಚಿತ್ತಾಪುರ ಪಟ್ಟಣದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.