ಕರ್ನಾಟಕ

karnataka

ETV Bharat / city

ರಾಜ್ಯ ಅನ್​ಲಾಕ್​: ವಿವಿಧ ದೇವಾಲಯಗಳು ಓಪನ್​.. ಬೆಳಗ್ಗೆಯಿಂದಲೇ ವಿಶೇಷ ಪೂಜೆ - Temples will open today

ಅನ್​ಲಾಕ್​ 3.0 ನಲ್ಲಿ ರಾಜ್ಯಾದ್ಯಂತ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿಂದ ಬೀಗ ಹಾಕಿದ್ದ ರಾಜ್ಯದ ಪ್ರಸಿದ್ಧ ದೇವಾಲಯಗಳು ಭಕ್ತರ ಪ್ರವೇಶಕ್ಕೆ ಮುಕ್ತವಾಗಿವೆ.

Unlock 3.O
ರಾಜ್ಯದ ವಿವಿಧ ದೇವಾಲಯಗಳು ಓಪನ್

By

Published : Jul 5, 2021, 10:26 AM IST

ಬಳ್ಳಾರಿ,ಕೊಪ್ಪಳ, ಕಲಬುರಗಿ:ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವೊಂದು ಮಾರ್ಗಸೂಚಿಯನ್ನು ಅಳವಡಿಸಿಕೊಂಡು ಅನ್​​ಲಾಕ್ 3.0 ಜಾರಿ ಮಾಡಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಬಳ್ಳಾರಿಯ ಕನಕ ದುರ್ಗಮ್ಮ, ಕಲಬುರಗಿಯ ಪ್ರಸಿದ್ಧ ಶ್ರೀ ಶರಣಬಸವೇಶ್ವರ ಹಾಗೂ ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿ ವಿರೂಪಾಕ್ಷೇಶ್ವರ ದೇವಾಲಯಗಳು ಭಕ್ತರ ದರ್ಶನಕ್ಕೆ ಬಾಗಿಲು ತೆರೆದಿವೆ.

ರಾಜ್ಯದ ವಿವಿಧ ದೇವಾಲಯಗಳು ಓಪನ್

ಬಳ್ಳಾರಿಯ ಅಧಿದೇವತೆ ಕನಕ ದುರ್ಗಮ್ಮಗೆ ಹೂವು ಮತ್ತು ನಿಂಬೆಹಣ್ಣಿನ ಹಾರ ಹಾಕಿ, ವಿಶೇಷ ಅಲಂಕಾರ ಮಾಡುವ ಮೂಲಕ ಪೂಜೆ ಸಲ್ಲಿಸಲಾಯಿತು. ಜೊತೆಗೆ ಇಂದು ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ವರ್ಷದ ಪರೀಕ್ಷೆಯಾದ್ದರಿಂದ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಅನುಮತಿ ಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಷೇತ್ರದಲ್ಲಿ ಸ್ಯಾನಿಟೈಸರ್​ ಬಳಕೆ, ಮಾಸ್ಕ್​, ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕೇವಲ ದೇವಿಯ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ತೆಂಗಿನಕಾಯಿ ಒಡೆಯೋದು ಸೇರಿದಂತೆ ಇನ್ನಿತರೆ ಸೇವೆಗಳಿಗೆ ಅವಕಾಶ ಇಲ್ಲವೆಂದು ದೇಗುಲದ ಧರ್ಮಕರ್ತ ಪಿ.ಗಾದೆಪ್ಪ ತಿಳಿಸಿದ್ದಾರೆ.

ವಿಜಯನಗರ: ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಐತಿಹಾಸಿಕ ಹಂಪಿ ವಿರೂಪಾಕ್ಷೇಶ್ವರ, ಸುಕ್ಷೇತ್ರ ಮೈಲಾರ, ಉಜ್ಜೈನಿ ಶ್ರೀ ಮರುಳಸಿದ್ದೇಶ್ವರ ದೇವಸ್ಥಾನದಲ್ಲಿ ಭಕ್ತರು ದರ್ಶನ ಪಡೆದರು. ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ, ದೇವರ ದರ್ಶನ ಪಡೆದರು. ಎರಡು ತಿಂಗಳು ನಂತರ ದೇವಾಲಯ ತೆರೆದ ಹಿನ್ನೆಲೆಯಲ್ಲಿ ದೇವಸ್ಥಾನ ಎದುರು ಮಹಿಳೆಯರು ಬಣ್ಣಬಣ್ಣದ ರಂಗೋಲಿ ಬರೆದರು.

ಶ್ರೀ ಶರಣಬಸವೇಶ್ವರ ದೇವಸ್ಥಾನ ಓಪನ್​

ಕಲಬುರಗಿ: ಬರೋಬ್ಬರಿ ಎರಡೂವರೆ ತಿಂಗಳ ಬಳಿಕ ಇಂದು ಬೆಳಗ್ಗೆ 6 ಗಂಟೆಗೆ ಕಲಬುರಗಿಯ ಪ್ರಸಿದ್ಧ ಶ್ರೀ ಶರಣಬಸವೇಶ್ವರ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, ಸೋಮವಾರವಾಗಿದ್ದರಿಂದ ಭಕ್ತರ ದಂಡೇ ದೇವಸ್ಥಾನದತ್ತ ಹರಿದುಬರುತ್ತಿದೆ. ದೇವಾಲಯದಲ್ಲಿ ಕೋವಿಡ್​ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮಾಸ್ಕ್ ಹಾಕದೇ ಬರುವ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಭಕ್ತರು ಸಹ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತು ಮಹಾ ದಾಸೋಹಿ ಶರಣಬಸವೇಶ್ವರರ ದರ್ಶನ ಪಡೆಯುತ್ತಿದ್ದಾರೆ.

ಕೊಪ್ಪಳದಲ್ಲಿ ಶೇ. 100ರಷ್ಟು ಬಸ್ ಸೇವೆ ಆರಂಭ

ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಇಂದಿನಿಂದ ಅನ್​ಲಾಕ್ 3.0 ಜಾರಿ ಮಾಡಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಇಂದಿನಿಂದ ಶೇ. 100ರಷ್ಟು ಬಸ್ ಸೇವೆ ಆರಂಭಿಸಲಾಗಿದೆ. ಜಿಲ್ಲೆಯಲ್ಲಿ ಸಾರಿಗೆ ಸಂಸ್ಥೆಯ ಐದು ಬಸ್ ಡಿಪೋಗಳಿದ್ದು, ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಬಸ್ ಸೇವೆ ಆರಂಭವಾಗುತ್ತಿದೆ. ಜಿಲ್ಲೆಯಲ್ಲಿ 230 ಮಾರ್ಗಗಳ ಬಸ್ ಓಡಾಟವಿದೆ‌. ಅದರಲ್ಲಿ ಇಂದು ಅಂದಾಜು 150 ಬಸ್ ಮಾರ್ಗ ಓಡಾಟ ಆರಂಭಿಸಲಾಗುವುದು ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ವಿವಿಧ ದೇವಾಲಯಗಳು ಓಪನ್

ಅನ್​ಲಾಕ್ ಆಗುತ್ತಿದ್ದಂತೆ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದ್ದು, ಬಹುತೇಕ ಪ್ರಯಾಣಿಕರು, ಚಾಲಕರು ಹಾಗೂ ನಿರ್ವಾಹಕರು ಸರಿಯಾಗಿ ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ನಿಯಮಗಳನ್ನು ಪ್ರಯಾಣಿಕರಿಗೆ ಹೇಳಬೇಕಾದ ಸಾರಿಗೆ ಸಿಬ್ಬಂದಿಯೇ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರೋದು ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕಂಡುಬಂತು.

ಇದನ್ನೂ ಓದಿ:Unlock 3.O: ರಾಜ್ಯದಲ್ಲಿ ಸಹಜ ಸ್ಥಿತಿಯತ್ತ ಜನಜೀವನ.. ಯಾವುದಕ್ಕೆಲ್ಲ ಅವಕಾಶ?

ABOUT THE AUTHOR

...view details