ಕಲಬುರಗಿ: ಚಾಕೊಲೇಟ್ ಅಂದ್ರೆ ಬಹುತೇಕ ಮಕ್ಕಳಿಗೆ ಇಷ್ಟ. ಆದ್ರೆ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಲಬುರಗಿ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಮಲಾಪುರ ತಾಲೂಕಿನ ಸೊಂತ ಗ್ರಾಮದ ಕೃಷ್ಣಕುಮಾರ ಬಂಧಿತ ಆರೋಪಿ.
ಕಿರಾಣಿ ಅಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರುತ್ತಿದ್ದ ಖದೀಮ ಅರೆಸ್ಟ್ - ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್
ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ - ಕಲಬುರಗಿಯಲ್ಲಿ ಆರೋಪಿ ಬಂಧನ- ಬಂಧಿತನಿಂದ 2.35 ಕೆ.ಜಿ ಗಾಂಜಾ ವಶಕ್ಕೆ
ಆರೋಪಿ ಅರೆಸ್ಟ್
ಕೃಷ್ಣಕುಮಾರ ಗ್ರಾಮದಲ್ಲಿರುವ ತನ್ನ ಕಿರಾಣಿ ಅಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 2.35 ಕೆ.ಜಿ ಗಾಂಜಾ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಕಿಸ್ಸಿಂಗ್ ಪಂದ್ಯ: ಮಂಗಳೂರಿನಲ್ಲಿ 8 ವಿದ್ಯಾರ್ಥಿಗಳ ಮೇಲೆ ಪೋಕ್ಸೊ ಪ್ರಕರಣ ದಾಖಲು