ಕರ್ನಾಟಕ

karnataka

ETV Bharat / city

ಕಲಬುರಗಿಯಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ: 1,750ಕ್ಕೇರಿದ ಸೋಂಕಿತರು - ಕಲಬುರಗಿ ಜಿಲ್ಲಾ ಸುದ್ದಿ

ಕೋವಿಡ್​ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಕಲಬುರಗಿ ಜಿಲ್ಲೆಯಲ್ಲಿ 51 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. 19 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1,750ಕ್ಕೆ ಏರಿಕೆಯಾಗಿದೆ

two-corona-cases-found-in-kalaburgagi
ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಪಾಸಿಟಿವ್

By

Published : Jul 7, 2020, 10:12 PM IST

ಕಲಬುರಗಿ: ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾಗೆ ಮೃತಪಟ್ಟಿದ್ದು, ಹೊಸದಾಗಿ 51 ಜನರಿಗೆ ಸೋಂಕು ತಗುಲಿರುವುದು ಆರೋಗ್ಯ ಇಲಾಖೆ ವರದಿಯಿಂದ ದೃಢಪಟ್ಟಿದೆ.

ನಗರದ ಸ್ಟೇಷನ್ ಬಜಾರ್ ಬಡಾವಣೆಯ 71 ವರ್ಷದ (ರೋಗಿ-26,671) ವೃದ್ಧ ಹಾಗೂ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ನಿವಾಸಿ 40 ವರ್ಷದ (ರೋಗಿ-26681) ಜುಲೈ 5ರಂದು ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

71 ವರ್ಷದ ವೃದ್ಧ ಉಸಿರಾಟ ಸಮಸ್ಸೆಯಿಂದ ಜುಲೈ 5ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಅಂದೆ ಮೃತಪಟ್ಟಿದ್ದಾರೆ‌. 40 ವರ್ಷದ ವ್ಯಕ್ತಿ ಉಸಿರಾಟ ಸಮಸ್ಯೆಯಿಂದ ಜುಲೈ 3ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಜುಲೈ 5ರಂದು ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆ ಸೇರಿದಂತೆ ಇತರೆ ರೋಗಗಳಿಂದ ಇಬ್ಬರು ಬಳಲುತ್ತಿದ್ದರು. ಜೊತೆಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ‌ ಎಂದು ವೈದ್ಯಕೀಯ ವರದಿ ತಿಳಿಸಿದೆ.

ಮಹಾರಾಷ್ಟ್ರದಿಂದ ಮರಳಿದ ಓರ್ವ ವ್ಯಕ್ತಿ ಸೇರಿದಂತೆ ಇಂದು 52 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಲ್ಲಿ ಬಹುತೇಕರು ತೀವ್ರ ಉಸಿರಾಟ ಸಮಸ್ಯೆ, ಶೀತ ಜ್ವರದಿಂದ ಬಳಲುತ್ತಿರುವವರು ಹಾಗೂ ಸೋಂಕಿತರೊಂದಿಗೆ ನೇರ ಸಂಪರ್ಕಕ್ಕೆ ಬಂದವರಾಗಿದ್ದಾರೆ.

ಇಂದು 19 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,750ಕ್ಕೆ ಏರಿಕೆಯಾಗಿದೆ. ಡಿಸ್ಚಾರ್ಜ್ ಆದವರ ಸಂಖ್ಯೆ 1,329, ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಸದ್ಯ 392 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

ABOUT THE AUTHOR

...view details