ಕರ್ನಾಟಕ

karnataka

ETV Bharat / city

ಆಟೋಗೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರ ದುರ್ಮರಣ.. - ಕಲಬುರಗಿ ಆಟೋ ಅಪಘಾತ ಸುದ್ದಿ

ಜಿಲ್ಲೆಯ ಸೇಡಂ ತಾಲೂಕಿನ ಅಳ್ಳೊಳ್ಳಿ ಗೇಟ್ ಬಳಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಆಟೋಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರಕರಣ ಸೇಡಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

two death in accident near sedam allolli gate
ಕಲಬುರಗಿ ಆಟೋ ಅಪಘಾತ

By

Published : Feb 8, 2020, 7:18 PM IST

ಕಲಬುರಗಿ:ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಆಟೋಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಸೇರಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಅಳ್ಳೊಳ್ಳಿ ಗೇಟ್ ಬಳಿ ನಡೆದಿದೆ.

ಬಸವರಾಜ(40) ಹಾಗೂ ಸಿದ್ಧಾರ್ಥ (16) ಎಂಬುವರು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅಳ್ಳೊಳ್ಳಿ ಗ್ರಾಮದಿಂದ ಸೇಡಂಗೆ ಪ್ರಾಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details