ಕರ್ನಾಟಕ

karnataka

ETV Bharat / city

ಕ್ರೂಸರ್-ಕಾರು ನಡುವೆ ಮುಖಾಮುಖಿ ಡಿಕ್ಕಿ: ತೆಲಂಗಾಣದ ಇಬ್ಬರು ಸಾವು - ಕ್ರೂಸರ್ ಕಾರು ಅಪಘಾತ

ಕಲಬುರಗಿಯ ಖ್ವಾಜಾ ಬಂದೆ ನವಾಜ್ ದರ್ಗಾ ದರ್ಶನ ಪಡೆದು ಬೀದರ್‌ನ ಗುರುನಾನಕ್​ಗೆ ತೆರಳುತ್ತಿದ್ದ ವೇಳೆ ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ

ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ
ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

By

Published : Jul 3, 2022, 2:15 PM IST

ಕಲಬುರಗಿ: ಕ್ರೂಸರ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತೆಲಂಗಾಣ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ನಡೆದಿದೆ.

ತೆಲಂಗಾಣದ ಹನುಮಕೊಂಡಾ ನಗರದ ಉಜಲಿಬೇಸ ನಿವಾಸಿ ಮಹಮ್ಮದ್ ಅಬ್ದುಲ್ ಮಜೀದ ಸಿದ್ಧಿಖಿ (71) ಹಾಗೂ ಹೈದರಾಬಾದ್​ನ ಬಾಲಾಜಿ ನಗರದ ಸಾದಯಾ ಖುನ್ನಿಸಾ ಬೇಗಂ (55) ಮೃತರು. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಕಲಬುರಗಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಕ್ರೂಸರ್​ನಲ್ಲಿ ಪ್ರಯಾಣಿಸುತ್ತಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಶಸ್ತ್ರಸಜ್ಜಿತ ಎಲ್​ಇಟಿ ಉಗ್ರರ ಹಿಡಿದು ಸೇನೆಗೆ ಒಪ್ಪಿಸಿದ ಜನರು; ₹2 ಲಕ್ಷ ಬಹುಮಾನ ಘೋಷಣೆ

ABOUT THE AUTHOR

...view details