ಕಲಬುರಗಿ:ಹೈದರಾಬಾದ್ನಲ್ಲಿ ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತ ಮಹಿಳಾ ಸಂಸ್ಕೃತಿ ಸಂಘಟನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತೆಲಂಗಾಣ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪರೋಕ್ಷವಾಗಿ ಆರೋಪಿಗಳಿಗೆ ಸರ್ಕಾರ ಸಹಕರಿಸುತ್ತಿದೆ ಎಂದು ಆರೋಪಿಸಿದರು. ಕೂಡಲೇ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿ, ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.