ಕಲಬುರಗಿ: ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಿ, ಸುಮಾರು 2 ಲಕ್ಷದ 22 ಸಾವಿರ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ್ ಬಳಿ ನಡೆದಿದೆ.
ವಾಡಿ ಪೊಲೀಸರ ಕಾರ್ಯಾಚರಣೆ: ಆರೋಪಿ ಸಮೇತ 2.22 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ - ಗಾಂಜಾ ಸಾಗಾಟ
ಕಲಬುರಗಿ ವಾಡಿಯ ಬಲರಾಮ್ ಚೌಕ್ ಬಳಿ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಎಸ್ಪಿ ಇಶಾ ಪಂತ್ ಮಾರ್ಗದರ್ಶನದಲ್ಲಿ ಚಿತ್ತಾಪುರ ಠಾಣೆ ಸಿಪಿಐ ಹಾಗೂ ವಾಡಿ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.
ವಾಡಿ ಪೊಲೀಸರ ಕಾರ್ಯಾಚರಣೆ
ಖಚಿತ ಮಾಹಿತಿ ಮೇರೆಗೆ ಎಸ್ಪಿ ಇಶಾಪಂತ್ ಮಾರ್ಗದರ್ಶನದಲ್ಲಿ ಶಹಬಾದ್ ಡಿವೈಎಸ್ಪಿ ನೇತೃತ್ವದಲ್ಲಿ ಚಿತ್ತಾಪುರ ಠಾಣೆ ಸಿಪಿಐ ಹಾಗೂ ವಾಡಿ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ವಾಡಿಯ ಬಲರಾಮ್ ಚೌಕ್ ಬಳಿ ವಾಹನದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹಸಿರು ಇಂಧನ ಬಳಕೆ ಉತ್ತೇಜಿಸುವ ನವೀಕರಿಸಬಹುದಾದ ಇಂಧನ ನೀತಿಗೆ ಸಚಿವ ಸಂಪುಟ ಸಭೆ ಅಸ್ತು!