ಕಲಬುರಗಿ:ಮಹಾರಾಷ್ಟ್ರದ ಡ್ಯಾಂಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆಯಾಗುತ್ತಿದ್ದು,ಜಿಲ್ಲೆಯ ಭೀಮಾ ನದಿ ಪಾತ್ರದ 148 ಗ್ರಾಮಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
ಜಲಾಶಯಗಳಿಂದ ಅಧಿಕ ನೀರು ಬಿಡುಗಡೆ: 148 ಗ್ರಾಮಗಳ ಸ್ಥಳಾಂತರಕ್ಕೆ ಸಜ್ಜು - Kalburgi district news
ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚಿನ ನೀರು ಬಿಡುಗಡೆಯಾಗುತ್ತಿರುವ ಕಾರಣ 148 ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚಿಸಿದೆ. ಜನರು ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ
7.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ. ಜೇವರ್ಗಿ, ಚಿತ್ತಾಪುರ, ಅಫ್ಜಲ್ಪುರ ಹಾಗೂ ಸೇಡಂ ತಾಲೂಕುಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಭೀಮಾ ನದಿ ತೀರದ ಹಾಗೂ ಹಿನ್ನೀರಿನ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಲು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಮನವಿ ಮಾಡಿದ್ದಾರೆ.