ಕಲಬುರಗಿ:ಹಾಡಹಗಲೇ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಅಫಜಲಪುರ ತಾಲೂಕಿನ ಬಂದರವಾಡನಲ್ಲಿ ನಡೆದಿದೆ.
35 ವರ್ಷದ ಮಹಿಳೆ ಕೊಲೆಯಾಗಿದ್ದಾರೆ. ನಿತ್ಯದಂತೆ ಶುಕ್ರವಾರ ಮಧ್ಯಾಹ್ನ ಜಮೀನಿಗೆ ಮಹಿಳೆ ನೀರು ಬಿಡಲು ಹೋದಾಗ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಮಹಿಳೆಯೆ ಕತ್ತು ಬಿಗಿದು, ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಇನ್ನು ಅರಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಹಿನ್ನೆಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.