ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದಿಗೆ ಕೊರೊನಾ ಲಸಿಕೆ ಪಡೆದವರ ಸಂಖ್ಯೆ 10.01 ಲಕ್ಷ ದಾಟಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ದ.ಕ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಪಡೆದ 10 ಲಕ್ಷಕ್ಕೂ ಅಧಿಕ ಮಂದಿ - 10 lakh people received corona vaccine
ದ.ಕ ಜಿಲ್ಲೆಯಲ್ಲಿ ಈವರೆಗೆ 7,87,699 ಮಂದಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. 2,13,909 ಮಂದಿ ಎರಡೂ ಡೋಸ್ಗಳನ್ನು ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದ್ದಾರೆ.
ಕೊರೊನಾ ಲಸಿಕೆ
ಜಿಲ್ಲೆಯಲ್ಲಿ ಈವರೆಗೆ 7,87,699 ಮಂದಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಎರಡೂ ಡೋಸ್ಗಳನ್ನು 2,13,909 ಮಂದಿ ಪಡೆದಿದ್ದಾರೆ. ಇಂದು 5,322 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಇಂದು 224 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು 190 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,960 ಸಕ್ರಿಯ ಪ್ರಕರಣಗಳಿದ್ದು, ಇಂದಿನ ಪಾಸಿಟಿವಿಟಿ ರೇಟ್ 3.05% ಇದೆ.