ಮಂಗಳೂರು (ದಕ್ಷಿಣಕನ್ನಡ):ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದವರ ಪೈಕಿ 12 ಸೋಂಕಿತರು ಗುಣಮುಖರಾಗಿ, ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಪ್ರತಿ ಇವರಲ್ಲಿ ಮೇ 12ರಂದು ದುಬೈನಿಂದ ಬಂದಿದ್ದ 76 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಗಂಟಲು ದ್ರವ ವರದಿಯಲ್ಲಿ ನೆಗೆಟಿವ್ ಎಂದು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಇವರೊಂದಿಗೆ 11 ವರ್ಷದ ಬಾಲಕಿ, 6 ಪುರುಷರು ಮತ್ತು ಮೂವರು ಮಹಿಳೆಯರು ಕೂಡ ಬಿಡುಗಡೆ ಆಗಿದ್ದಾರೆ.
ಸೋಂಕು ಶಂಕೆ ಹಿನ್ನೆಲೆಯಲ್ಲಿ ಇಂದು 37 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದೆ. ಈ ಹಿಂದೆ ಕಳುಹಿಸಿರುವ 120 ಮಂದಿಯ ಗಂಟಲು ದ್ರವದ ವರದಿಯಲ್ಲಿ 14 ಜನರಲ್ಲಿ ಸೋಂಕು ದೃಢಪಟ್ಟಿದೆ. 106 ಮಂದಿಯ ವರದಿ ನೆಗೆಟಿವ್ ಎಂದಿದ್ದು, 231 ಮಂದಿಯ ವರದಿ ಬರಬೇಕಿದ್ದು, ಒಟ್ಟು 29 ಮಂದಿ ನಿಗಾದಲ್ಲಿದ್ದಾರೆ.
17 ಮಂದಿಯನ್ನ ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಹಾಗೂ ಮೂವರನ್ನು ಸುರತ್ಕಲ್ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 6,073 ಮಂದಿ 28 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 32 ಮಂದಿ ಸೇರಿ ಈವರೆಗೆ 42,572 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ.
ಒಟ್ಟು 133 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 56 ಮಂದಿ ಗುಣಮುಖರಾಗಿದ್ದಾರೆ. 70 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.