ಮಂಗಳೂರು: ಭಾರೀ ಮಳೆ ಹಿನ್ನೆಲೆ ಯುವಕನೋರ್ವ ನೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಕಪಿಲಾ ನದಿ ನೆರೆ ನೀರಿನಲ್ಲಿ ಮುಳುಗಿ ಯುವಕ ಸಾವು - manglore today news
ಭಾರೀ ಮಳೆ ಹಿನ್ನೆಲೆ ಯುವಕನೋರ್ವ ನೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಕಪಿಲಾ ನದಿ ನೆರೆ ನೀರಿನಲ್ಲಿ ಮುಳುಗಿ ಯುವಕ ಸಾವು
ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ವಿಶ್ವನಾಥ್ ಎಂಬುವವರ ಮಗ ಭವಿತ್ (23) ಮೃತ ಯುವಕ. ಕೊಕ್ಕಡ ಸಮೀಪದ ಸುದೆಗುಂಡಿ ಎಂಬಲ್ಲಿ ಕಪಿಲಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ಸಾವಿನ ಕುರಿತು ಯಾವುದೇ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.