ಕೊಣಾಜೆ(ದಕ್ಷಿಣ ಕನ್ನಡ): ಅಸೈಗೋಳಿಯಲ್ಲಿ ಕೆಎಸ್‌ಆರ್‌ಪಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್, ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ. ಘಟನೆ ಸಂಬಂಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಪಿ ಪೊಲೀಸ್ ಕಾನ್‌ಸ್ಟೇಬಲ್ ನಾಪತ್ತೆ - ದಕ್ಷಿಣ ಕನ್ನಡ ಜಿಲ್ಲೆ
ಕರ್ತವ್ಯದಲ್ಲಿ ಕೆಎಸ್ಆರ್‌ಪಿ ಪೊಲೀಸ್ ಕಾನ್‌ಸ್ಟೇಬಲ್ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯಲ್ಲಿ ನಡೆದಿದೆ. 29 ವರ್ಷದ ಅನಿಲ್ ಕುಮಾರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೆಎಸ್‌ಆರ್‌ಪಿ ಪೊಲೀಸ್ ಕಾನ್‌ಸ್ಟೇಬಲ್ ನಾಪತ್ತೆ
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್‌ನ 29 ವರ್ಷದ ಅನಿಲ್ ಕುಮಾರ್ ಚಿಕ್ಕಮಗಳೂರು ಜಿಲ್ಲೆ ಮೂಲದವರು. ಅನಿಲ್ ಅವರು ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಗುರುವಾರ ಸಂಜೆಯಿಂದ ಅವರು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಟುಂಬದ ಕಲಹದ ಕಾರಣದಿಂದ ಬೇಸತ್ತು ಅವರು ನಾಪತ್ತೆಯಾಗಿರಬಹುದು ಎಂದು ಸಂಶಯಿಸಲಾಗಿದೆ. ಸತ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.